ಬೆಂಗಳೂರು: ‘ರಸ್ತೆ ಕಾಮಗಾರಿ ಸಂಬಂಧ ಸಚಿವ ಕೃಷ್ಣಬೈರೇಗೌಡ ಬೆಂಬಲಿಗ ಮುನಿರಾಜು ಹಲ್ಲೆ ಮಾಡಿದ್ದಾರೆ’ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತ ಕಾಂತರಾಜು ಅಮೃತಹಳ್ಳಿ ಠಾಣೆಗೆ ದೂರು ಕೊಟ್ಟಿದ್ದಾರೆ.

‘ಕೆಂಪಾಪುರ-ದಾಸರಹಳ್ಳಿ ರಸ್ತೆಯನ್ನು ಕಿರಿದು ಮಾಡುತ್ತಿದ್ದನ್ನು ಪ್ರಶ್ನಿಸಿದ್ದಕ್ಕೆ ನಮ್ಮಿಬ್ಬರ ನಡುವೆ ವಾಗ್ವಾದ ನಡೆದಿತ್ತು. ಈ ವೇಳೆ ಮುನಿರಾಜು, ಕಾಲಿನಿಂದ ನನ್ನನ್ನು ಒದ್ದು ಕಪಾಳಕ್ಕೆ ಹೊಡೆದಿದ್ದಾರೆ. ಘಟನೆಯ ದೃಶ್ಯಾವಳಿಗಳು ಸಿ.ಸಿ.ಟಿ.ವಿ ಕ್ಯಾಮೆರಾದಲ್ಲೂ ಸೆರೆಯಾಗಿವೆ’ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ದೂರು ಸ್ವೀಕರಿಸಲು ಪೊಲೀಸರು ನಿರಾಕರಿಸಿದ್ದರು. ಈ ಸಂಬಂಧ ಆಕ್ರೋಶಗೊಂಡ ಬಿಜೆಪಿ ಕಾರ್ಯಕರ್ತರು ಠಾಣೆ ಮುಂದೆ ಪ್ರತಿಭಟನೆ ನಡೆಸಿದ್ದರು.

‘ದೂರು ಸ್ವೀಕರಿಸಿ, ಅತಿ ಗಂಭೀರವಲ್ಲದ ಪ್ರಕರಣ (ಎನ್‌ಸಿರ್) ದಾಖಲಿಸಿಕೊಂಡಿದ್ದೇವೆ. ಬಳಿಕ ಮುನಿರಾಜು ಹಾಗೂ ಕಾಂತರಾಜು ರಾಜಿ ಮಾಡಿಕೊಂಡಿದ್ದಾರೆ’ ಎಂದು ಪೊಲೀಸರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.