ಗುರುವಾರ , ಫೆಬ್ರವರಿ 27, 2020
19 °C

ವೇಶ್ಯಾವಾಟಿಕೆ: ಆರು ಯುವತಿಯರ ರಕ್ಷಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಉದ್ಯೋಗದ ಆಮಿಷವೊಡ್ಡಿ ಹೊರ ದೇಶ ಹಾಗೂ ಹೊರ ರಾಜ್ಯದ ಯುವತಿಯರನ್ನು ನಗರಕ್ಕೆ ಕರೆತಂದು ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದಡಿ ಸೂರ್ಯ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

‘ವಿವೇಕನಗರ, ಕೋರಮಂಗಲ ಹಾಗೂ ಸುತ್ತಮುತ್ತ ಮನೆಗಳನ್ನು ಬಾಡಿಗೆಗೆ ಪಡೆಯುತ್ತಿದ್ದ ಆರೋಪಿಗಳು, ಅಲ್ಲಿಯೇ ಮಹಿಳೆಯರನ್ನು ಅಕ್ರಮ ಬಂಧನದಲ್ಲಿ ಇರಿಸುತ್ತಿದ್ದರು. ಆ ಬಗ್ಗೆ ಮಾಹಿತಿ ಬರುತ್ತಿದ್ದಂತೆ ದಾಳಿ ಮಾಡಿ ಸೂರ್ಯನನ್ನು ಬಂಧಿಸಲಾಯಿತು’ ಎಂದು ಪೊಲೀಸರು ಹೇಳಿದರು.

‘ದಾಳಿ ವೇಳೆ ಆರೋಪಿಗಳಾದ ಅಬ್ದುಲ್ ಮುಕೀದ್, ಗುರುರಾಜ್ ಹಾಗೂ ಪ್ರಜ್ವಲ್ ತಪ್ಪಿಸಿಕೊಂಡರು. ಅವರಿಗಾಗಿ ಹುಡುಕಾಟ ನಡೆದಿದೆ. ಥಾಯ್ಲೆಂಡ್‌ನ ಯುವತಿ ಸೇರಿ ಆರು ಯುವತಿಯನ್ನು ರಕ್ಷಿಸಿ ಅವರ ಕುಟುಂಬದವರಿಗೆ ಮಾಹಿತಿ ನೀಡಿ ಪುನರ್ವಸತಿ ಕಲ್ಪಿಸಲಾಗಿದೆ’ ಎಂದು ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)