ಶನಿವಾರ, ಸೆಪ್ಟೆಂಬರ್ 19, 2020
21 °C

ರೌಡಿ ಮೇಲೆ ಗುಂಡಿನ ದಾಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ನಗರ ಸಿಲ್ವರ್‌ಗೇಟ್‌ ಬಳಿ ಭಾನುವಾರ ನಸುಕಿನ ಜಾವ ಮಾವಿನಹಣ್ಣಿನ ವ್ಯಾಪಾರಿಗಳ ಮೇಲೆ ಹಲ್ಲೆ ನಡೆಸಿ, ಹಣ ದೋಚಿದ್ದ ಪ್ರಕರಣದಲ್ಲಿ ಮಂಗಳವಾರ ಬಂಧನಕ್ಕೆ ತೆರಳಿದ್ದ ಪೊಲೀಸರ ಮೇಲೆ ರೌಡಿ ಭುವಿತ್‌ ರಾಜ್‌ ಎಂಬಾತ ಹಲ್ಲೆಗೆ ಯತ್ನಿಸಿದ್ದು, ಪೊಲೀಸರು ಗುಂಡಿಕ್ಕಿ ಆತನನ್ನು ಬಂಧಿಸಿದ್ದಾರೆ.

ಸರಿಪಳ್ಳ ನಿವಾಸಿಯಾಗಿರುವ ರೌಡಿ ಭುವಿತ್ ರಾಜ್ (35) ಬಂಧನಕ್ಕೆ ಕಂಕನಾಡಿ ನಗರ ಠಾಣೆ ಪೊಲೀಸರು ತೆರಳಿದ್ದರು. ಕಾರನ್ನು ಬೆನ್ನಟ್ಟಿ ಹೋಗುತ್ತಿದ್ದಾಗ ತಲವಾರು ಮತ್ತು ಚೂರಿಯಿಂದ ಕಾನ್‌ಸ್ಟೆಬಲ್‌ ವಿನೋದ್‌ ಮೇಲೆ ಆತ ಹಲ್ಲೆ ನಡೆಸಿದ್ದಾನೆ. ತಕ್ಷಣವೇ ಇನ್‌ಸ್ಪೆಕ್ಟರ್‌ ಅಶೋಕ್‌ ಅವರು ಭುವಿತ್‌ ರಾಜ್‌ ಕಾಲಿಗೆ ಗುಂಡು ಹೊಡೆದಿದ್ದಾರೆ. ಗಾಯಗೊಂಡು ಕುಸಿದುಬಿದ್ದ ಆತನನ್ನು ಬಂಧಿಸಲಾಗಿದೆ.

ಭುವಿತ್‌ ರಾಜ್‌ ಜೊತೆಗಿದ್ದು, ಪರಾರಿಗೆ ಯತ್ನಿಸಿದ ಸಂದೇಶ್ (25), ಸನತ್ (22), ಆರೋಪಿಗಳಿಗೆ ಬೈಕ್ ನೀಡಿ ಸಹಕರಿಸಿದ ಅಶ್ವತ್ಥ್ (25) ಎಂಬುವವರನ್ನೂ ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳು ಕುಲಶೇಖರದ ಸಿಲ್ವರ್‌ ಗೇಟ್‌ ಬಳಿ ಭಾನುವಾರ ನಸುಕಿನ ಜಾವ ಅಕ್ರಮ ಗೋ ಸಾಗಣೆ ಶಂಕೆಯ ನೆಪದಲ್ಲಿ ಮಾವಿನ ಹಣ್ಣು ಸಾಗಣೆ ಲಾರಿಯನ್ನು ಅಡ್ಡಗಟ್ಟಿದ್ದರು. ಮೂವರ ಮೇಲೆ ಹಲ್ಲೆ ನಡೆಸಿ ₹ 70,000 ನಗದು ದೋಚಿಕೊಂಡು ಪರಾರಿಯಾಗಿದ್ದಾರೆ ಎಂಬ ಆರೋಪದ ಮೇಲೆ ಪ್ರಕರಣ ದಾಖಲಾಗಿತ್ತು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.