ಶುಕ್ರವಾರ, ಏಪ್ರಿಲ್ 16, 2021
22 °C

ಇಬ್ಬರು ಮೊಬೈಲ್‌ ಕಳ್ಳರ ಸೆರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮೊಬೈಲ್‌ ಕಿತ್ತುಕೊಂಡು ಪರಾರಿಯಾಗುತ್ತಿದ್ದ ಇಬ್ಬರು ಕಳ್ಳರನ್ನು ಪರಪ್ಪನ ಅಗ್ರಹಾರ ಪೊಲೀಸರು ಬಂಧಿಸಿದ್ದಾರೆ.

ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ದಸ್ತಗೀರ್‌ ಫೈರೋಝ್‌ ಮತ್ತು ಮೊಹ್ಮದ್‌ ಆಫ್ರೀದ್‌ ಬಂಧಿತರು. ಗೋವಿಂದಶೆಟ್ಟಿ ಪಾಳ್ಯದಲ್ಲಿ ದ್ವಿಚಕ್ರ ವಾಹನದಲ್ಲಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಇಬ್ಬರನ್ನೂ ಗಮನಿಸಿದ ಪೊಲೀಸರು, ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದಾಗ ವಿಷಯ ಗೊತ್ತಾಗಿದೆ.

‘ಅತ್ತಿಬೆಲೆ ವೃತ್ತದಲ್ಲಿರುವ ಬಸ್‌ ನಿಲ್ದಾಣದ ಬಳಿಯಿಂದ ವ್ಯಕ್ತಿಯೊಬ್ಬರ ಕೈಯಲ್ಲಿದ್ದ ಮೊಬೈಲ್‌ ಕಿತ್ತುಕೊಂಡಿದ್ದ ಈ ಇಬ್ಬರೂ ಬಳಿಕ ತಲೆಮರೆಸಿಕೊಂಡಿದ್ದರು.

ಕದ್ದ ಮೊಬೈಲ್‌ನ್ನು ಕಡಿಮೆ ಬೆಲೆಗೆ ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದಾರೆ’ ಎಂದು ಪೊಲೀಸರು ತಿಳಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.