ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಲ್ಲಿ 10 ತಿಂಗಳಲ್ಲಿ 692 ರೈತರ ಆತ್ಮಹತ್ಯೆ

Published 25 ಫೆಬ್ರುವರಿ 2024, 23:40 IST
Last Updated 25 ಫೆಬ್ರುವರಿ 2024, 23:40 IST
ಅಕ್ಷರ ಗಾತ್ರ

ಬೆಂಗಳೂರು: 2023ರ ಏಪ್ರಿಲ್‌ನಿಂದ 2024ರ ಜನವರಿ ಮಧ್ಯದ ಅವಧಿಯಲ್ಲಿ ರಾಜ್ಯದಲ್ಲಿ 692 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಾವೇರಿ, ಬೆಳಗಾವಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅತ್ಯಧಿಕ ಸಂಖ್ಯೆಯ ರೈತರ ಆತ್ಮಹತ್ಯೆ ಪ್ರಕರಣಗಳು ನಡೆದಿವೆ.

ಕಾಂಗ್ರೆಸ್‌ನ ಯು.ಬಿ. ಬಣಕಾರ್‌ ಅವರ ಪ್ರಶ್ನೆಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ವಿಧಾನಸಭೆಯಲ್ಲಿ ನೀಡಿರುವ ಉತ್ತರದಲ್ಲಿ ಈ ಮಾಹಿತಿ ಒದಗಿಸಿದ್ದಾರೆ.

‘ಕಳೆದ ಹತ್ತು ತಿಂಗಳಲ್ಲಿ ರಾಜ್ಯದಲ್ಲಿ ಆತ್ಯಹತ್ಯೆ ಪ್ರಕರಣ ಸೇರಿದಂತೆ 1,240 ರೈತರು ಮೃತಪಟ್ಟಿದ್ದಾರೆ. ಅವರಲ್ಲಿ 548 ಮಂದಿ ವಿವಿಧ ದುರ್ಘಟನೆಗಳಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ’ ಎಂಬ ಮಾಹಿತಿ ಉತ್ತರದಲ್ಲಿದೆ.

ಆತ್ಮಹತ್ಯೆ ಪ್ರಕರಣಗಳೆಂದು ವರದಿಯಾಗಿದ್ದ ಪ್ರಕರಣಗಳ ಪೈಕಿ 448 ಮಂದಿಯ ಕುಟುಂಬಗಳಿಗೆ ಪರಿಹಾರ ವಿತರಿಸಲಾಗಿದೆ. 76 ಪ್ರಕರಣಗಳಲ್ಲಿ ಪರಿಹಾರದ ಅರ್ಜಿಯನ್ನು ತಿರಸ್ಕರಿಸಲಾಗಿದೆ. ಆಕಸ್ಮಿಕ ಮರಣಗಳ ಪ್ರಕರಣಗಳಲ್ಲಿ 307 ಮಂದಿಯ ಕುಟುಂಬಗಳಿಗೆ ಪರಿಹಾರ ನೀಡಿದ್ದು, 42 ಅರ್ಜಿಗಳನ್ನು ತಿರಸ್ಕರಿಸಲಾಗಿದೆ. ಆತ್ಮಹತ್ಯೆ ಪ್ರಕರಣಗಳಲ್ಲಿ 113 ಮತ್ತು ಆಕಸ್ಮಿಕ ಮರಣದ ಪ್ರಕರಣಗಳಲ್ಲಿ 109 ರೈತರ ಕುಟುಂಬಗಳಿಗೆ ಪರಿಹಾರ ಪಾವತಿ ಬಾಕಿ ಇದೆ ಎಂದು ಸಚಿವರು ಉತ್ತರದಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT