ಮಂಗಳವಾರ, ಜನವರಿ 28, 2020
25 °C

ಬಂಡವಾಳ ಹೂಡಿಕೆ: ಕೃಷ್ಣ-ಜಾಯೆದ್ ಮಾತುಕತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಬಂಡವಾಳ ಹೂಡಿಕೆಗೆ ಇರುವ ಅವಕಾಶಗಳ ಕುರಿತು ಅಬುಧಾಬಿ ಬಂಡವಾಳ ಹೂಡಿಕೆ ಪ್ರಾಧಿಕಾರದ ವ್ಯವಸ್ಥಾಪಕ ನಿರ್ದೇಶಕ ಶೇಖ್ ಅಹ್ಮದ್ ಬಿನ್ ಜಾಯೆದ್ ಅವರು ವಿದೇಶಾಂಗ ಸಚಿವ ಎಸ್.ಎಂ. ಕೃಷ್ಣ ಅವರ ಜೊತೆ ಶುಕ್ರವಾರ ಮಾತುಕತೆ ನಡೆಸಿದರು.ಇಲ್ಲಿನ ಖಾಸಗಿ ಹೋಟೆಲ್ ಒಂದರಲ್ಲಿ ನಡೆದ ಮಾತುಕತೆ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಕೃಷ್ಣ ಅವರು, `ರಾಜ್ಯದ ಮೂಲಸೌಕರ್ಯ ಅಭಿವೃದ್ಧಿ, ಆರೋಗ್ಯ, ಇಂಧನ ಮತ್ತಿತರ ಕ್ಷೇತ್ರಗಳಲ್ಲಿ ಹೂಡಿಕೆಗೆ ಅವರು ಆಸಕ್ತಿ ತೋರಿದ್ದಾರೆ. ಈ ನಿಟ್ಟಿನಲ್ಲಿ ಮಾತುಕತೆ ಅರ್ಥಪೂರ್ಣವಾಗಿತ್ತು~ ಎಂದರು.ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಎಸ್.ವಿ. ರಂಗನಾಥ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕೆ. ಜೈರಾಜ್ ಮತ್ತಿತರರು  ಪಾಲ್ಗೊಂಡಿದ್ದರು.

ಪ್ರತಿಕ್ರಿಯಿಸಿ (+)