ಬೆಂಗಳೂರು: ಕಳಸಾ– ಬಂಡೂರಿ ನಾಲಾ ಯೋಜನೆಯಿಂದ 7.56 ಟಿಎಂಸಿ ಅಡಿ ನೀರು ಬಳಕೆ ಮಾಡಿಕೊಳ್ಳಲು ಅನುಕೂಲವಾಗುವಂತೆ ಮಧ್ಯಂತರ ಆದೇಶ ನೀಡಲು ಕೋರಿ ರಾಜ್ಯ ಮಹಾದಾಯಿ ನ್ಯಾಯಮಂಡಳಿಗೆ ಮನವಿ ಸಲ್ಲಿಸುವ ಸಾಧ್ಯತೆ ಇದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಇಲ್ಲಿ ಕರೆದಿದ್ದ ವಿಧಾನಮಂಡಲದ ಉಭಯ ಸದನಗಳ ನಾಯಕರ ಸಭೆಯಲ್ಲಿ ಮಧ್ಯಂತರ ಆದೇಶಕ್ಕಾಗಿ ಮನವಿ ಸಲ್ಲಿಸುವ ಕುರಿತು ಚರ್ಚೆಯಾಗಿದೆ. ಹುಬ್ಬಳ್ಳಿ– ಧಾರವಾಡ, ಬಾಗಲಕೋಟೆ, ಗದಗ, ಬೆಳಗಾವಿ ನಗರ, ಕೆಲವು ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸಲು ರಾಜ್ಯ ಸರ್ಕಾರ ಈ ಯೋಜನೆ ಕೈಗೆತ್ತಿಕೊಂಡಿದೆ. ಆದರೆ, ಗೋವಾ ರಾಜ್ಯ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಕಾರಣ ಕೇಂದ್ರ ಮಹಾದಾಯಿ ನ್ಯಾಯಮಂಡಳಿ ರಚಿಸಿದ್ದು, ಮಂಡಳಿಯ ಅಧ್ಯಕ್ಷ ಜೆ.ಎಂ.ಪಾಂಚಾಲ್ ನೇತೃತ್ವದ ತಂಡ ವಾಸ್ತವ ಸ್ಥಿತಿ ಅರಿಯಲು ರಾಜ್ಯದಲ್ಲಿ ಪ್ರವಾಸ ಹಮ್ಮಿಕೊಂಡಿದೆ.

ಮಹಾದಾಯಿ ನದಿಯಲ್ಲಿ ರಾಜ್ಯದ ಪಾಲು 24.15 ಟಿಎಂಸಿ ಅಡಿ ಎಂದು ಕರ್ನಾಟಕ ಹೇಳುತ್ತಿದೆ. ಈ ನದಿ ಮಹಾರಾಷ್ಟ್ರ, ಗೋವಾದಲ್ಲೂ ಹರಿಯುತ್ತಿದ್ದು, ಒಟ್ಟಾರೆ ಮೂರೂ ರಾಜ್ಯಗಳಿಗೆ ನೀರು ಹಂಚಿಕೆಯಾಗಬೇಕು. ಮಧ್ಯಂತರ ತೀರ್ಪು ಬಂದರೆ ಕೇಂದ್ರ ಜಲ ಆಯೋಗ ಮತ್ತು ಪರಿಸರ ಇಲಾಖೆಯ ಅನುಮತಿ ಪಡೆದು ಕಳಸಾ ಬಳಿ ಡ್ಯಾಂ ನಿರ್ಮಿಸಲು ಅನುಕೂಲವಾಗಲಿದೆ. ಇದು ಅರಣ್ಯದ ವ್ಯಾಪ್ತಿಯಲ್ಲಿ ಬರಲಿದ್ದು, ಡ್ಯಾಂ ನಿರ್ಮಾಣವಾಗದ ಹೊರತು ನಾಲೆಗಳ ನಿರ್ಮಾಣ ಕಾರ್ಯ ಪೂರ್ಣಗೊಂಡರೂ ನೀರು ಬಳಸಿಕೊಳ್ಳಲು ಆಗುವುದಿಲ್ಲ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.

ತಜ್ಞರೊಂದಿಗೆ ಚರ್ಚೆ: ಕಾನೂನು ತಜ್ಞರೊಂದಿಗೆ ಚರ್ಚಿಸಿದ ನಂತರ ರಾಜ್ಯದ ನಿಲುವನ್ನು ನ್ಯಾಯಮಂಡಳಿಗೆ ತಿಳಿಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.ವಿರೋಧ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ, ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಡಿ.ವಿ.ಸದಾನಂದಗೌಡ, ಮಾಜಿ ಸಚಿವ ಬಸವರಾಜ ಬೊಮ್ಮಾಯಿ, ಶಾಸಕ ಎನ್.ಎಚ್.ಕೋನರೆಡ್ಡಿ ಮೊದಲಾದವರು ಸಭೆಯಲ್ಲಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.