ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

7ನೇ ವೇತನ ಆಯೋಗ: ಪ್ರಶ್ನಾವಳಿ ಬಿಡುಗಡೆ

Last Updated 17 ಜನವರಿ 2023, 21:35 IST
ಅಕ್ಷರ ಗಾತ್ರ

ಬೆಂಗಳೂರು: ಕೇಂದ್ರೀಯ ವೇತನ ರಚನೆಯನ್ನು ಅಳವಡಿಸಿಕೊಳ್ಳುವ ಕಾರ್ಯಸಾಧ್ಯತೆಯನ್ನು ಪರಿಶೀಲಿಸಲು 7 ನೇ ಕರ್ನಾಟಕ ರಾಜ್ಯ ವೇತನ ಆಯೋಗ ಪ್ರಶ್ನಾವಳಿಗಳನ್ನು ಬಿಡುಗಡೆ ಮಾಡಿದ್ದು, ರಾಜ್ಯ ಸರ್ಕಾರಿ ನೌಕರರು ಮತ್ತು ಸಾರ್ವಜನಿಕರಿಂದ ಅಭಿಪ್ರಾಯಗಳನ್ನು ಆಹ್ವಾನಿಸಿದೆ.

ರಾಜ್ಯದಲ್ಲಿ 5.11 ಲಕ್ಷ ನೌಕರರು ಪ್ರಸ್ತುತ ಕಾರ್ಯನಿರ್ವಹಿಸುತ್ತಿದ್ದು, ₹ 41,288 ಕೋಟಿ ಹಾಗೂ ನಿವೃತ್ತ ಪಿಂಚಣಿದಾರರಿಗೆ ₹ 24,016 ಕೋಟಿಗಳನ್ನು ವ್ಯಯಿಸುತ್ತಿದೆ. ರಾಜ್ಯದ ಒಟ್ಟು ಆದಾಯದಲ್ಲಿ ವೇತನಕ್ಕಾಗಿಯೇ ಶೇ 33.70 ಬಳಕೆಯಾಗುತ್ತಿದೆ.

ಭವಿಷ್ಯದ ನಿವೃತ್ತಿ ಪಿಂಚಣಿ, ಹೊಸ ಪಿಂಚಣಿ ವ್ಯವಸ್ಥೆಗೆ ತಗಲುವ ವೆಚ್ಚ, ವಾರ್ಷಿಕ ವೇತನ ಬಡ್ತಿಗಳನ್ನು ಗಮನದಲ್ಲಿ ಇಟ್ಟುಕೊಂಡು ವೇತನ ಪರಿಷ್ಕರಣೆ ಮಾಡಬೇಕಿದೆ. ಖಾಲಿ ಇರುವ 2.58 ಲಕ್ಷ ಹುದ್ದೆಗಳ ಉಳಿತಾಯವನ್ನೂ ಪರಿಗಣಿಸಿ ಅಂತಿಮ ನಿರ್ಧಾರ ಮಾಡಲಾಗುವುದು. ಅದಕ್ಕಾಗಿ ಅಭಿಪ್ರಾಯಗಳನ್ನು ಫೆಬ್ರವರಿ10 ರ ಒಳಗೆ ಅರಮನೆಯ ರಸ್ತೆಯ ಔಷಧ ಇಲಾಖೆಯ ಕಟ್ಟಡದಲ್ಲಿನ ಆಯೋಗದ ಕಚೇರಿಗೆ ತಲುಪಿಸಲು ಕೋರಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT