ಸೋಮವಾರ, 26 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸ ವರ್ಷಾಚರಣೆ: ಬೆಂಗಳೂರಿನ ಸಿಬಿಡಿ ರಸ್ತೆಗಳಲ್ಲಿ 8 ಟನ್‌ ತ್ಯಾಜ್ಯ ತೆರವು

Published 1 ಜನವರಿ 2024, 15:49 IST
Last Updated 1 ಜನವರಿ 2024, 15:49 IST
ಅಕ್ಷರ ಗಾತ್ರ

ಬೆಂಗಳೂರು: ಹೊಸ ವರ್ಷ ಆಚರಣೆ ಸಂದರ್ಭದಲ್ಲಿ ನಗರದ ಸಿಬಿಡಿ ರಸ್ತೆಗಳಲ್ಲಿ ಉತ್ಪಾದನೆಯಾದ 8 ಟನ್‌ ತ್ಯಾಜ್ಯವನ್ನು ಬಿಬಿಎಂಪಿ ಸಿಬ್ಬಂದಿ ಸೋಮವಾರ ಮುಂಜಾನೆಯೇ ತೆರವುಗೊಳಿಸಿದ್ದಾರೆ.

ಎಂ.ಜಿ ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್, ರೆಸಿಡೆನ್ಸಿ ರಸ್ತೆ, ರಿಚ್ಮಂಡ್‌ ರಸ್ತೆ, ಸೇಂಟ್ ಮಾರ್ಕ್ಸ್ ರಸ್ತೆ, ಕಸ್ತೂರ್ ಬಾ ರಸ್ತೆಗಳಲ್ಲಿ ಸೋಮವಾರ ನಸುಕಿನ 3.30ರಿಂದ 6.30ರ ಅವಧಿಯಲ್ಲಿ ಸ್ವಚ್ಛತಾ ಕಾರ್ಯ ನಡೆಸಿದ್ದಾರೆ. ತ್ಯಾಜ್ಯವನ್ನು ಬೀದಿಗಳಿಂದ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ ಎಂದು ಬಿಬಿಎಂಪಿ ಪ್ರಕಟಣೆ ತಿಳಿಸಿದೆ.

ಶಾಂತಿನಗರ ವಿಭಾಗದ ಘನತ್ಯಾಜ್ಯ ವಿಭಾಗದ 3 ಮೇಲ್ವಿಚಾರಕರು, 80ಕ್ಕೂ ಹೆಚ್ಚು ಪೌರಕಾರ್ಮಿಕರು ಸ್ವಚ್ಛತಾ ಕಾರ್ಯ ಮಾಡಿದರು. ಒಂದು ಕಾಂಪ್ಯಾಕ್ಟರ್ ಹಾಗೂ ಏಳು ಆಟೊ ಟಿಪ್ಪರ್‌ಗಳನ್ನು ಬಳಸಲಾಯಿತು.

ಸಿಬಿಡಿ ರಸ್ತೆಗಳು ಹಾಗೂ ಪಾದಚಾರಿ ಮಾರ್ಗಗಳಲ್ಲಿ ಎಸೆದಿದ್ದ ಪ್ಲಾಸ್ಟಿಕ್ ಕವರ್, ಪ್ಲಾಸ್ಟಿಕ್ ತ್ಯಾಜ್ಯ, ಚಪ್ಪಲಿಗಳು, ಮದ್ಯದ ಬಾಟಲಿಗಳು ಸೇರಿದಂತೆ ಇನ್ನಿತರೆ ಅನುಪಯುಕ್ತ ವಸ್ತುಗಳನ್ನು ಬೇರ್ಪಡಿಸಿ ಸಂಗ್ರಹಿಸಲಾಗಿದೆ. ಮರು ಬಳಕೆಯ ಸುಮಾರು 2 ಟನ್ ತ್ಯಾಜ್ಯವನ್ನು ಒಣ ತ್ಯಾಜ್ಯ ಸಂಗ್ರಹಣಾ ಘಟಕಕ್ಕೆ ಕಳುಹಿಸಲಾಗಿದೆ ಎಂದು ಘನತ್ಯಾಜ್ಯ ವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ಅಪ್ಪುರಾಜ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT