ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

7 ತಿಂಗಳಲ್ಲಿ 8 ಸಾವಿರ ಎಚ್‌ಐವಿ ಪ್ರಕರಣ

ಐಸಿಟಿಸಿ ಕೇಂದ್ರಗಳಲ್ಲಿ ಸೋಂಕು ಪತ್ತೆ ಪರೀಕ್ಷೆ
Last Updated 30 ನವೆಂಬರ್ 2022, 20:10 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿನಸಮಗ್ರ ಆಪ್ತ ಸಮಾಲೋಚನೆ ಹಾಗೂ ಪರೀಕ್ಷಾ ಕೇಂದ್ರಗಳ (ಐಸಿಟಿಸಿ) ಮೂಲಕ ಕಳೆದ ಏಳು ತಿಂಗಳಲ್ಲಿ ಹೊಸದಾಗಿ 8,023 ಎಚ್‌ಐವಿ ಸೋಂಕಿತರನ್ನು ಗುರುತಿಸಲಾಗಿದೆ.

ವಿಶ್ವ ಆರೋಗ್ಯ ಸಂಸ್ಥೆ ಪ್ರತಿ ವರ್ಷ ಡಿ.1ರಂದು ವಿಶ್ವ ಏಡ್ಸ್ ದಿನವನ್ನು ಆಚರಿಸುತ್ತಿದೆ. ರಾಜ್ಯದಲ್ಲಿ ಆರೋಗ್ಯ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‍ಷನ್ ಸೊಸೈಟಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ‘ಸಮಾನಗೊಳಿಸು’ ಈ ವರ್ಷದ ಘೋಷವಾಕ್ಯವಾಗಿದೆ. ರಾಜ್ಯದಲ್ಲಿ 470 ಐಸಿಟಿಸಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. 2022–23ನೇ ಸಾಲಿನಲ್ಲಿ 18,65,141 ಜನರನ್ನು ಪರೀಕ್ಷಿಸಲಾಗಿದೆ. ಶೇ 0.41ರಷ್ಟು ಮಂದಿಯಲ್ಲಿ ಎಚ್‌ಐವಿ ಸೋಂಕು ದೃಢಪಟ್ಟಿದೆ. ಈ ಅವಧಿಯಲ್ಲಿ 8,37,709 ಗರ್ಭಿಣಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಶೇ 0.04ರಷ್ಟು ಮಂದಿ ಎಚ್‌ಐವಿ ಸೋಂಕಿತರಾಗಿದ್ದಾರೆ.

2017–18ರಲ್ಲಿ ಎಚ್‌ಐವಿ ಸೋಂಕು ದೃಢ ಪ್ರಮಾಣ ಶೇ 0.85ರಷ್ಟಿತ್ತು. ಗರ್ಭಿಣಿಯರಲ್ಲಿ ಈ ಪ್ರಮಾಣ ಶೇ 0.06ರಷ್ಟು ದೃಢಪಟ್ಟಿತ್ತು. ಈ ಪ್ರಮಾಣ ವರ್ಷದಿಂದ ವರ್ಷಕ್ಕೆ ಇಳಿಕೆಯಾಗುತ್ತಿದೆ.ಎಚ್‌ಐವಿ ಸೋಂಕಿತರಲ್ಲಿ ಸದ್ಯ 3.73 ಲಕ್ಷ ಮಂದಿ ಎಆರ್‌ಟಿ ಕೇಂದ್ರಗಳಲ್ಲಿ (ಆ್ಯಂಟಿ ರಿಟ್ರೋವಲ್ ಥೆರಪಿ) ಚಿಕಿತ್ಸೆಗಾಗಿ ನೋಂದಣಿ ಮಾಡಿಕೊಂಡಿದ್ದಾರೆ. ಅವರಲ್ಲಿ 1.76 ಲಕ್ಷ ಮಂದಿ ಎಆರ್‌ಟಿ ಕೇಂದ್ರದಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ಆರೋಗ್ಯ ಸೊಸೈಟಿ ತಿಳಿಸಿದೆ.

94,315 ಮಂದಿ ಮರಣ: ಎಆರ್‌ಟಿ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಎಚ್‌ಐವಿ ಪೀಡಿತರಲ್ಲಿ 2,841 ಮಂದಿ ಸೇರಿ 94,315 ಮಂದಿ ಮೃತಪಟ್ಟಿದ್ದಾರೆ. ಎಚ್‌ಐವಿ ತಡೆಗೆ ನ್ಯಾಕೊ ಸಂಸ್ಥೆಯ ಸಹಯೋಗದಲ್ಲಿ ಲಾರಿ ಚಾಲಕರು ಸೇರಿ ಅಪಾಯದ ಅಂಚಿನಲ್ಲಿರುವ ಸಮುದಾಯಗಳಿಗೆ ವಿಶೇಷ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗಿದೆ. 3.79 ಲಕ್ಷ ಮಂದಿ ನೋಂದಣಿಯಾಗಿದ್ದು, ಅವರಿಗೆ 3 ತಿಂಗಳಿಗೊಮ್ಮೆ ವೈದ್ಯಕೀಯ ತಪಾಸಣೆ ಹಾಗೂ 6 ತಿಂಗಳಿಗೊಮ್ಮೆ ಎಚ್‌ಐವಿ ಸೋಂಕು ಪತ್ತೆ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಸೊಸೈಟಿ ಹೇಳಿದೆ.

ಎಚ್‌ಐವಿ ಸೋಂಕಿತರಿಗೆ ಅಂತ್ಯೋದಯ ಯೋಜನೆಯಡಿ 35 ಕೆ.ಜಿ. ಆಹಾರ ಧಾನ್ಯ ಒದಗಿಸಲಾಗುತ್ತಿದೆ. ಶಿಕ್ಷಣ ಹಾಗೂ ಆರೋಗ್ಯ ಸಂಬಂಧಿಸಿದಂತೆ ವಿವಿಧ ಯೋಜನೆಯಡಿ ಸೌಲಭ್ಯ ನೀಡಲಾಗುತ್ತಿದೆ ಎಂದು ಸೊಸೈಟಿ ಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT