ಶನಿವಾರ, 9 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ನಮ್ಮ ಕ್ಲಿನಿಕ್‌’ನಲ್ಲಿ 8 ಸಾವಿರ ರೋಗಿಗಳಿಗೆ ಚಿಕಿತ್ಸೆ

Last Updated 15 ಫೆಬ್ರವರಿ 2023, 16:24 IST
ಅಕ್ಷರ ಗಾತ್ರ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಫೆ.7ರಂದು ಆರಂಭವಾಗಿರುವ 108 ‘ನಮ್ಮ ಕ್ಲಿನಿಕ್‌’ಗಳಲ್ಲಿ 8 ಸಾವಿರಕ್ಕೂ ಹೆಚ್ಚು ರೋಗಿಗಳಿಗೆ ಚಿಕಿತ್ಸೆ ನೀಡಲಾಗಿದೆ.

‘ನಮ್ಮ ಕ್ಲಿನಿಕ್’ಗಳಲ್ಲಿ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಸಿಬ್ಬಂದಿ ನಿಯೋಜಿಸಲಾಗಿದೆ. ಒಂದು ವಾರದಲ್ಲಿ 3,911 ಪುರುಷರು, 4,871 ಮಹಿಳೆಯರು, 14 ಇತರರು ಸೇರಿ ಒಟ್ಟು 8,796 ಮಂದಿ ಹೊರ ರೋಗಿಗಳಾಗಿ ತಪಾಸಣೆ ಮಾಡಿಸಿಕೊಂಡಿದ್ದಾರೆ. 3,196 ಲ್ಯಾಬ್‌ ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಬಿಬಿಎಂಪಿ ಸಾರ್ವಜನಿಕ ಆರೋಗ್ಯ ವಿಭಾಗದ ಮುಖ್ಯ ಆರೋಗ್ಯಾಧಿಕಾರಿ ಡಾ. ಬಾಲಸುಂದರ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT