ಶನಿವಾರ, ಜನವರಿ 18, 2020
25 °C

ರಾಷ್ಟ್ರೀಯ ಲೋಕ ಅದಾಲತ್‌: 86 ಸಾವಿರ ಪ್ರಕರಣ ಇತ್ಯರ್ಥ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಇತ್ತೀಚೆಗೆ ನಡೆದ ರಾಷ್ಟ್ರೀಯ ಲೋಕ ಅದಾಲತ್‌–2019 ರಲ್ಲಿ ಒಟ್ಟು 86,380 ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜಿ.ಬಸವರಾಜ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನ್ಯಾಯಾಲಯದಲ್ಲಿ ಬಾಕಿ ಇದ್ದ 78,829 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ. 6,417 ವ್ಯಾಜ್ಯ ಪೂರ್ವ ಪ್ರಕರಣಗಳು ಹಾಗೂ ಹೈಕೋರ್ಟ್‌ನಲ್ಲಿ ಬಾಕಿ ಇದ್ದ 1,134 ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ. ಈ ಪ್ರಕರಣಗಳಲ್ಲಿ ರಾಜಿಯಾದ ಮೊತ್ತ ₹ 379 ಕೋಟಿ ಎಂದು ವಿವರಿಸಲಾಗಿದೆ.

‘ಇದೇ ಸೆಪ್ಟೆಂಬರ್ 14ರಂದು ನಡೆದಿದ್ದ ಲೋಕ ಅದಾಲತ್‌ನಲ್ಲಿ 65,864 ಪ್ರಕರಣಗಳು ಇತ್ಯರ್ಥವಾಗಿದ್ದವು. ಈ ಬಾರಿ ಎಲ್ಲರ ಸಹಕಾರದಿಂದ ಈ ಸಂಖ್ಯೆ 86 ಸಾವಿರ ದಾಟಿದೆ’ ಎಂದು ಬಸವರಾಜ ಅವರು ತಿಳಿಸಿದ್ದಾರೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು