ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಪ್ಪು ಶಿಲೀಂಧ್ರ: ಮೃತರ ಸಂಖ್ಯೆ 87ಕ್ಕೆ ಏರಿಕೆ

Last Updated 4 ಜುಲೈ 2021, 21:32 IST
ಅಕ್ಷರ ಗಾತ್ರ

ಬೆಂಗಳೂರು: ನಗರದಲ್ಲಿ ಕಪ್ಪು ಶಿಲೀಂಧ್ರ ಸೋಂಕಿನ ತೀವ್ರತೆಗೆ ಒಂದು ವಾರದಲ್ಲಿ ಆರು ಮಂದಿ ಮೃತಪಟ್ಟಿದ್ದು, ಈವರೆಗೆ ಸಾವಿಗೀಡಾದವರ ಒಟ್ಟು ಸಂಖ್ಯೆ 87ಕ್ಕೆ ಏರಿಕೆ ಕಂಡಿದೆ.

ಹೊಸದಾಗಿ ಬೌರಿಂಗ್ ಆಸ್ಪತ್ರೆಯಲ್ಲಿ ಇಬ್ಬರಿಗೆ ಶಿಲೀಂಧ್ರ ಸೋಂಕು ತಗುಲಿರುವುದು ದೃಢಪಟ್ಟಿದೆ. ಏಳು ದಿನಗಳಲ್ಲಿ 26 ಮಂದಿಗೆ ಸೋಂಕು ತಗುಲಿರುವುದು ಖಚಿತಪಟ್ಟಿದೆ. ಈವರೆಗೆ ಈ ಸೋಂಕಿಗೆ ಒಳಗಾದವರ ಒಟ್ಟು ಸಂಖ್ಯೆ 1,068ಕ್ಕೆ ಏರಿಕೆಯಾಗಿದೆ.

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಈವರೆಗೆ 201 ಮಂದಿ ದಾಖಲಾಗಿದ್ದಾರೆ. ಅದೇ ರೀತಿ, ಬೌರಿಂಗ್ ಆಸ್ಪತ್ರೆಯಲ್ಲಿ ಒಟ್ಟು 310 ಹಾಗೂ ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ 3 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. ಕಪ್ಪು ಶಿಲೀಂಧ್ರ ಸೋಂಕಿತರಲ್ಲಿ ಈವರೆಗೆ 514 ಮಂದಿ ಸರ್ಕಾರಿ ವ್ಯವಸ್ಥೆಯಡಿ ದಾಖಲಾಗಿದ್ದಾರೆ. ಇನ್ನುಳಿದವರು ವಿವಿಧ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.

‘ಮೂರು ವಾರಗಳಿಂದ ಶಿಲೀಂಧ್ರ ಸೋಂಕು ಪ್ರಕರಣಗಳ ಸಂಖ್ಯೆ ಇಳಿಕೆ ಕಂಡಿದೆ. ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ಕೂಡ ಸೋಂಕಿತರಿಗೆ ಚಿಕಿತ್ಸೆ ಒದಗಿಸಲಾಗುತ್ತಿದೆ. ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿರುವ ಕಾರಣ ಆಸ್ಪತ್ರೆಗಳಲ್ಲಿ ಹಾಸಿಗೆಗಳ ಸಮಸ್ಯೆಯಿಲ್ಲ. ಕೆಲ ಖಾಸಗಿ ಆಸ್ಪತ್ರೆಗಳು ಪ್ರಕರಣಗಳನ್ನು ತಡವಾಗಿ ವರದಿ ಮಾಡುತ್ತಿವೆ’ ಎಂದು ಬೆಂಗಳೂರು ನಗರ ಜಿಲ್ಲಾ ಶಸ್ತ್ರಚಿಕಿತ್ಸಕ ಅನ್ಸರ್ ಅಹಮದ್ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT