ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ಕೋವಿಡ್‌ ಪ್ರಕರಣ ತುಸು ಇಳಿಕೆ

Last Updated 22 ಮಾರ್ಚ್ 2021, 20:48 IST
ಅಕ್ಷರ ಗಾತ್ರ

ಬೆಂಗಳೂರು: ನಗರದಲ್ಲಿ ಕಳೆದ ವಾರ ನಿತ್ಯ ಸಾವಿರಕ್ಕೂ ಅಧಿಕ ಪ್ರಕರಣಗಳು ದಾಖಲಾಗುತ್ತಿದ್ದವು. ಆದರೆ, ಸೋಮವಾರ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ತುಸು ಇಳಿಕೆಯಾಗಿದೆ.

‘ಕಳೆದ ಮೂರು ದಿನಗಳ‌ ಹಿಂದೆ ನಗರದಲ್ಲಿ 1030 ಕೋವಿಡ್‌ ಪ್ರಕರಣಗಳು ಪತ್ತೆಯಾಗಿದ್ದವು. ಸೋಮವಾರ 886 ಪ್ರಕರಣಗಳು ಮಾತ್ರ ದಾಖಲಾಗಿವೆ’ ಎಂದು ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌ ತಿಳಿಸಿದರು.

‘ನಗರದಲ್ಲಿ ಮತ್ತೆ ಕೋವಿಡ್‌ ಪ್ರಕರಣಗಳು ಹೆಚ್ಚಳವಾಗಲು ಶುರುವಾದ ಬಳಿಕ ಒಂದು ವಾರದಿಂದ ಈಚೆಗೆ ಕೋವಿಡ್‌ ಪರೀಕ್ಷೆ ಸಂಖ್ಯೆ ಗಣನೀಯವಗಿ ಹೆಚ್ಚಳ ಮಾಡಿದ್ದೇವೆ. ಶನಿವಾರ 50 ಸಾವಿರದಷ್ಟು ಕೋವಿಡ್‌ ಪರೀಕ್ಷೆ ನಡೆಸಿದ್ದೆವು. ವಾರದಿಂದ ಈಚೆಗೆ ಕೋವಿಡ್‌ ಪ್ರಕರಣ ಹೆಚ್ಚು ಪತ್ತೆಯಾಗುವುದಕ್ಕೆ ಇದು ಕೂಡಾ ಕಾರಣ’ ಎಂದು ಅವರು ವಿವರಿಸಿದರು.

‘ರೋಗ ಲಕ್ಷಣ ಇಲ್ಲದ ಸೋಂಕಿತರ ಆರೈಕೆಗೆ ಹಜ್‌ಭವನ ಹಾಗೂ ಎಚ್‌ಎಎಲ್‌ನ ಸಭಾಂಗಣ ಸಜ್ಜಾಗಿದೆ. ಆದರೆ, ಹೊಸತಾಗಿ ಕಂಡು ಬರುತ್ತಿರುವ ಪ್ರಕರಣಗಳು ಅಪಾರ್ಟ್‌ಮೆಂಟ್‌ ಸಮುಚ್ಚಯಗಳ ಬಳಿಯೇ ಹೆಚ್ಚಾಗಿ ಪತ್ತೆಯಾಗುತ್ತಿವೆ. ಅವರು ಮನೆಯಲ್ಲೇ ಪ್ರತ್ಯೇಕ ವಾಸಕ್ಕೆ ಒಳಗಾಗಲು ವ್ಯವಸ್ಥೆ ಹೊಂದಿರುತ್ತಾರೆ. ಹಾಗಾಗಿ ಆರೈಕೆ ಕೇಂದ್ರಗಳಿಗೆ ಬರುವವರ ಸಂಖ್ಯೆ ಕಡಿಮೆ ಇದೆ’ ಎಂದರು.

‘ಯಲಹಂಕ, ಆರ್‌.ಅರ್‌.ನಗರ ಹಾಗೂ ದಾಸರಹಳ್ಳಿ ಹೊರತಾಗಿ ಉಳಿದ ಐದೂ ವಲಯಗಳಲ್ಲೂ ಹೊಸ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ಪತ್ತೆಯಾಗಿವೆ. ಸೋಂಕಿತರ ಜೊತೆ ನೇರ ಸಂಪರ್ಕ ಹೊಂದಿದವರನ್ನು ಪತ್ತೆಹಚ್ಚಿ ಅವರನ್ನು ಪ್ರತ್ಯೇಕವಾಸಕ್ಕೆ ಒಳಪಡಿಸುವ ಮೂಲಕ ಸೋಂಕು ಹರಡದಂತೆ ನಿಯಂತ್ರಿಸಲಾಗುತ್ತಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT