ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾರ್ವಜನಿಕ ಸೇವೆಗೆ 911 ದ್ವಿಚಕ್ರ ಗಸ್ತು ವಾಹನ

Last Updated 26 ಡಿಸೆಂಬರ್ 2018, 12:29 IST
ಅಕ್ಷರ ಗಾತ್ರ

ಬೆಂಗಳೂರು:ಪೊಲೀಸ್‌ ಸಿಬ್ಬಂದಿಗೆ 911 ದ್ವಿಚಕ್ರ ಗಸ್ತು ವಾಹನವನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಅವರು ಬುಧವಾರ ವಿಧಾನಸೌಧ ಮುಂಭಾಗ ಸಾರ್ವಜನಿಕ ಸೇವೆಗೆ ಅರ್ಪಿಸಿದರು.

ಈ ವೇಳೆ ಮಾತನಾಡಿದ ಡಿಸಿಎಂ ಪರಮೇಶ್ವರ್, ಬೆಂಗಳೂರು ಪೊಲೀಸ್‌ ಬಹಳ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿದ್ದು, ಇಲಾಖೆಗೆ ಇನ್ನಷ್ಟು ಬಲ ತುಂಬಲು 911 ದ್ವಿಚಕ್ರ ವಾಹನಗಳನ್ನು ಗುಸ್ತು ತಿರುಗಲು ನೀಡಲಾಗಿದೆ. ಈಗಾಗಲೇ 300 ಹೊಯ್ಸಳ ಕಾರುಗಳು ಗಸ್ತು ತಿರುಗುತ್ತಿವೆ. ಆದರೆ ಕೆಲ ಬೀದಿಗಳಿಗೆ ಕಾರುಗಳು ಹೋಗಲು ಸಾಧ್ಯವಿಲ್ಲ.‌ ಹೀಗಾಗಿ ನಗರದೆಲ್ಲೆಡೆ ಗಸ್ತು ತಿರುಗಲು ಬೈಕ್‌ ನೀಡಲಾಗಿದ್ದು, ಹೆಚ್ಚು ಪರಿಣಾಮಕಾರಿಯಾಗಲಿದೆ ಎಂದರು.

ಹೊಸ ವರ್ಷ ಸಮೀಪಿಸುತ್ತಿದ್ದು, ಈ ಆಚರಣೆ ನಗರದೆಲ್ಲೆಡೆ ನಡೆಯಲಿದೆ.‌ ಈ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಇಂದೇ 911 ದ್ವಿಚಕ್ರ ಗಸ್ತು ವಾಹನ ನೀಡಲಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT