ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈಲ್ವೆ ಯೋಜನೆಗಳಿಗೆ ₹ 93 ಕೋಟಿ ಬಿಡುಗಡೆ: ಸಚಿವ ಎಂ.ಬಿ. ಪಾಟೀಲ

Published 4 ಮಾರ್ಚ್ 2024, 15:35 IST
Last Updated 4 ಮಾರ್ಚ್ 2024, 15:35 IST
ಅಕ್ಷರ ಗಾತ್ರ

ಬೆಂಗಳೂರು: ತುಮಕೂರು– ದಾವಣೆಗೆರೆ ಮತ್ತು ಗದಗ– ವಾಡಿ ರೈಲ್ವೆ ಯೋಜನೆಗಳಿಗೆ ರಾಜ್ಯ ಸರ್ಕಾರದಿಂದ ₹ 93.32 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ತಿಳಿಸಿದ್ದಾರೆ.

ಈ ಕುರಿತು ಸೋಮವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಎರಡೂ ಯೋಜನೆಗಳ ಭೂಸ್ವಾಧೀನ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ. ತುಮಕೂರು– ದಾವಣಗೆರೆ ರೈಲ್ವೆ ಯೋಜನೆಗೆ ₹ 50 ಮತ್ತು ಗದಗ– ವಾಡಿ ರೈಲ್ವೆ ಯೋಜನೆಗೆ ₹ 43.32 ಕೋಟಿ ಬಿಡುಗಡೆ ಮಾಡಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.

ಕೇಂದ್ರ ಸರ್ಕಾರವು ಕೈಗೆತ್ತಿಕೊಳ್ಳುವ ಕೆಲವು ರೈಲ್ವೆ ಯೋಜನೆಗಳಿಗೆ ರಾಜ್ಯ ಸರ್ಕಾರವು ಶೇಕಡ 50ರಷ್ಟನ್ನು ರಾಜ್ಯ ಸರ್ಕಾರ ಭರಿಸುತ್ತಿದೆ. ಈ ಎರಡೂ ಯೋಜನೆಗಳಲ್ಲಿ ಭೂಸ್ವಾಧೀನ ಪ್ರಕ್ರಿಯೆ ಮುಗಿದ ತಕ್ಷಣ ಕಾಮಗಾರಿಗಳು ವೇಗ ಪಡೆಯಲಿವೆ ಎಂದು ತಿಳಿಸಿದ್ದಾರೆ.

ರಾಜ್ಯದ  ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಸುಸಜ್ಜಿತವಾದ ವಿಮಾನ ನಿಲ್ದಾಣ ನಿರ್ಮಿಸಲು ಸರ್ಕಾರ ಮುಂದಾಗಿದೆ. ಮೈಸೂರು ಮತ್ತು ರಾಯಚೂರು ವಿಮಾನ ನಿಲ್ದಾಣ ಕಾಮಗಾರಿಗಳಿಗೆ ₹ 57.63 ಕೋಟಿ ಬಿಡುಗಡೆ ಮಾಡಲಾಗಿದೆ. ಈ ಪೈಕಿ ₹ 43.01 ಕೋಟಿಯನ್ನು ಮೈಸೂರು ವಿಮಾನ ನಿಲ್ದಾಣಕ್ಕೆ ಮತ್ತು ₹ 14.62 ಕೋಟಿಯನ್ನು ರಾಯಚೂರು ವಿಮಾನ ನಿಲ್ದಾಣಕ್ಕೆ ಒದಗಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT