ಬುಧವಾರ, ಆಗಸ್ಟ್ 4, 2021
22 °C

ಬೆಂಗಳೂರು: 93 ವರ್ಷದ ವೃದ್ಧ ಗುಣಮುಖ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಬೆಂಗಳೂರು: ಕೊರೊನಾ ಸೋಂಕಿನಿಂದ ಬಳಲುತ್ತಿದ್ದ 93 ವರ್ಷದ ವೃದ್ಧರೊಬ್ಬರು ಗುಣಮುಖರಾಗಿ ಮನೆಗೆ ತೆರಳಿ
ದ್ದಾರೆ. ಅವರಿಗೆ ನಗರದ ಸ್ಪರ್ಶ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು.

ಈ ಹಿಂದೆ ಬೆಂಗಳೂರಿನಲ್ಲಿ 99 ವರ್ಷದ ವೃದ್ಧೆ ಹಾಗೂ ಚಿತ್ರದುರ್ಗದ ಹಿರಿಯೂರಿನಲ್ಲಿ 96 ವರ್ಷದ ಅಜ್ಜಿ ಚೇತರಿಸಿಕೊಂಡು ಮನೆಗೆ ತೆರಳಿದ್ದರು. 

ಜಯನಗರದ ನಿವಾಸಿಯಾದ 93 ವರ್ಷದ ವೃದ್ಧ ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಕೋವಿಡ್ ಪೀಡಿತರಾಗಿ ಜೂ.21 ರಂದು ಸ್ಪರ್ಶ್ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಸ್ಥಿತಿ ಗಂಭೀರವಾಗಿದ್ದ ಹಿನ್ನೆಲೆಯಲ್ಲಿ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ನೀಡಲಾಯಿತು. 19 ದಿನಗಳ ಬಳಿಕ ಅವರು ಚೇತರಿಸಿಕೊಂಡಿದ್ದಾರೆ. 

‘ಸೋಂಕಿತ ವ್ಯಕ್ತಿ ಮಧುಮೇಹ ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು ಹಾಗಾಗಿ ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿತ್ತು. ಅವರು ಜು.9ರಂದು ಮನೆಗೆ ತೆರಳಿದ್ದಾರೆ’ ಎಂದು ಆಸ್ಪತ್ರೆಯ ಐಸಿಯು ವಿಭಾಗದ ಮುಖ್ಯಸ್ಥ ಡಾ.ಉಲ್ಲಾಸ್ ಗೋಪಾಲಕೃಷ್ಣ ತಿಳಿಸಿದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು