ಸೋಮವಾರ, ಸೆಪ್ಟೆಂಬರ್ 20, 2021
29 °C

ಕೆಎಂಸಿ ಚುನಾವಣೆ ರದ್ದು ಆದೇಶಕ್ಕೆ ತಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಕರ್ನಾಟಕ ವೈದ್ಯಕೀಯ ಪರಿಷತ್ತಿಗೆ (ಕೆಎಂಸಿ) ನಡೆದಿದ್ದ ಚುನಾವಣೆ ರದ್ದುಗೊಳಿಸಿರುವ ಹೈಕೋರ್ಟ್‌ ಏಕ ಸದಸ್ಯ ಪೀಠದ ಆದೇಶಕ್ಕೆ ವಿಭಾಗೀಯ ಪೀಠ ತಡೆ ನೀಡಿದೆ.

ಡಾ.ಮಧುಸೂದನ ಕರಿಗನೂರು ಮತ್ತು ಇತರರು ಸಲ್ಲಿಸಿದ್ದ ರಿಟ್ ಮೇಲ್ಮನವಿ ಪರಿಶೀಲಿಸಿದ ನ್ಯಾಯಮೂರ್ತಿ ಕೆ.ಎಸ್. ಮುದಗಲ್ ನೇತೃತ್ವದ ವಿಭಾಗೀಯ ಪೀಠ, ಮಧ್ಯಂತರ ಆದೇಶ ನೀಡಿದೆ. ಈ ವಿಷಯದ ಬಗ್ಗೆ ವಿವರಣೆ ಅಗತ್ಯವಿದೆ ಎಂದು ತಿಳಿಸಿದ ಪೀಠ, ಕೆಎಂಸಿ ರಿಜಿಸ್ಟ್ರಾರ್ ಅವರಿಗೆ ನೋಟಿಸ್ ನೀಡಲು ಆದೇಶಿಸಿತು.

‘2020ರ ಜನವರಿ 23ರಂದು ಚುನಾವಣೆ ನಡೆದಿದ್ದು, ಮತದಾರರ ಪಟ್ಟಿ ಅಂತಿಮಗೊಳಿಸುವಲ್ಲಿಯೂ ಲೋಪ ಆಗಿದೆ. ಮತದಾರರ ಪಟ್ಟಿಗೆ ಸಲ್ಲಿಸಿದ್ದ ಆಕ್ಷೇಪಣೆಗಳನ್ನು ಚುನಾವಣಾಧಿಕಾರಿ ಪರಿಗಣಿಸಿರಲಿಲ್ಲ. ಈ ಕ್ರಮಗಳು ಕಾನೂನುಬಾಹಿರ’ ಎಂದು ಏಕ ಸದಸ್ಯ ಪೀಠ ತಿಳಿಸಿತ್ತು. ಹೊಸದಾಗಿ ಚುನಾವಣೆ ನಡೆಸಲು 2021ರ ಜೂನ್‌ 7 ರಂದು ಆದೇಶಿಸಿತ್ತು.

‘ಚುನಾವಣಾಧಿಕಾರಿಯಿಂದ ಆಗಿರುವ ಲೋಪದ ಬಗ್ಗೆ ಅನು ಮಾನ ಇದೆಯೇ ಹೊರತು ಸಾಬೀತಾಗಿಲ್ಲ’ ಎಂದು ಮೇಲ್ಮನವಿಯಲ್ಲಿ ವಾದಿಸಲಾಗಿದೆ. ವಿಚಾರಣೆಯನ್ನು ಪೀಠ ಸೆ.22ಕ್ಕೆ ಮುಂದೂಡಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು