ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರ್ಚಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೃಹತ್‌ ಸಮಾವೇಶ

ಹಿಂದೂ ದೇವಾಲಯಗಳ ಅರ್ಚಕರ–ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟ ನಿರ್ಧಾರ
Published 27 ಅಕ್ಟೋಬರ್ 2023, 16:19 IST
Last Updated 27 ಅಕ್ಟೋಬರ್ 2023, 16:19 IST
ಅಕ್ಷರ ಗಾತ್ರ

ಬೆಂಗಳೂರು: ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ–ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟದ ಸುವರ್ಣ ಮಹೋತ್ಸವದ ಅಂಗವಾಗಿ ಮತ್ತು ಅರ್ಚಕರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ 2024ರ ಫೆ.7ಕ್ಕೆ ಬೆಂಗಳೂರು ಪುರಭವನದಲ್ಲಿ ರಾಜ್ಯಮಟ್ಟದ ಬೃಹತ್‌ ಸಮಾವೇಶ ನಡೆಸಲು ಒಕ್ಕೂಟ ನಿರ್ಧರಿಸಿದೆ.

ಅರ್ಚಕರ–ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟದ ರಾಜ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌ ನೇತೃತ್ವದಲ್ಲಿ ನಡೆಯಲಿರುವ ಈ ಸಮಾವೇಶದಲ್ಲಿ ಮುಖ್ಯಮಂತ್ರಿ, ಕೇಂದ್ರ  ಸಚಿವರು, ಮುಜರಾಯಿ ಸಚಿವರು ಸಹಿತ ಗಣ್ಯರು ಭಾಗವಹಿಸಲಿದ್ದಾರೆ ಎಂದು ಒಕ್ಕೂಟದ ಪ್ರಧಾನ ಸಲಹೆಗಾರ ರಾಧಾಕೃಷ್ಣ ಕೆ.ಇ. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

‘ರಾಜ್ಯದಲ್ಲಿ 1.86 ಲಕ್ಷ ದೇವಸ್ಥಾನಗಳಿವೆ. ಅದರಲ್ಲಿ ಸುಮಾರು 38 ಸಾವಿರ ದೇವಸ್ಥಾನಗಳು ಮುಜರಾಯಿ ಇಲಾಖೆಯ ಅಡಿಯಲ್ಲಿವೆ. ಎಲ್ಲ ದೇವಸ್ಥಾನಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಶೌಚಾಲಯ, ಸ್ನಾನಗೃಹ ನಿರ್ಮಿಸಬೇಕು. ಚಪ್ಪಲಿ ಸ್ಟ್ಯಾಂಡ್‌, ಹಣ್ಣು, ತೆಂಗಿನಕಾಯಿ, ಹೂವು ಅಂಗಡಿಗಳನ್ನು ವ್ಯವಸ್ಥಿತವಾಗಿ ಮಾಡಬೇಕು. ‘ಸಿ’ ವರ್ಗದ ದೇವಸ್ಥಾನಗಳ ಅರ್ಚಕರು ಮತ್ತು ಪರಿಚಾರಕರಿಗೆ ವಿಮೆ, ಸೇವಾ ಭದ್ರತೆ, ಪಿಂಚಣಿ, ಆರೋಗ್ಯ ಕಾರ್ಡ್‌, ವಸತಿ ಒದಗಿಸಬೇಕು ಎಂಬುದು ನಮ್ಮ ಬೇಡಿಕೆ’ ಎಂದು ತಿಳಿಸಿದರು.

‘ಎಲ್ಲ ದೇವಸ್ಥಾನಗಳಲ್ಲಿ ಶಿಸ್ತು ಸಮಿತಿ ರಚಿಸಬೇಕು. ಸಿಸಿಟಿವಿ ಕ್ಯಾಮೆರಾ ಅಳವಡಿಸಬೇಕು. ₹ 5,000 ಇರುವ ತಸ್ತೀಕ್‌ ಅನ್ನು ₹ 10 ಸಾವಿರಕ್ಕೆ ಏರಿಸಬೇಕು. ಅರ್ಚಕರಿಗೆ ತರಬೇತಿ ನೀಡಬೇಕು. ರಾಜ್ಯದಲ್ಲಿ ಒಂದೇ ಭುವನೇಶ್ವರಿ ದೇವಸ್ಥಾನ ಇದ್ದು, ಎಲ್ಲ ಕಡೆ ಸ್ಥಾಪನೆ ಮಾಡಬೇಕು. ‘ಬಿ’ ಮತ್ತು ‘ಸಿ’ ವರ್ಗದ ದೇವಾಲಯಗಳಿಗೆ ವಿದ್ಯುತ್ ಉಚಿತವಾಗಿ ಒದಗಿಸಬೇಕು. ಅರ್ಚಕರ ನಿವೃತ್ತಿಯನ್ನು ರದ್ದು ಮಾಡಬೇಕು. ದೇವಸ್ಥಾನಗಳನ್ನು 11 ವರ್ಷಗಳಿಗೆ ಒಮ್ಮೆ ಪುನರುಜ್ಜೀವನ ಮಾಡಬೇಕು. ಪರಿಸ್ಥಿತಿಗೆ ತಕ್ಕಂತೆ ಆದಾಯ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು. ಅರ್ಚಕರಿಗೆ ಮತ್ತು ಸಿಬ್ಬಂದಿಗೆ ಪೊಲೀಸ್‌ ರಕ್ಷಣೆ ನೀಡಬೇಕು ಎಂಬುದು ನಮ್ಮ ಒತ್ತಾಯ’ ಎಂದು ಹೇಳಿದರು. 

ಮುಖ್ಯ ಪ್ರಧಾನ ಕಾರ್ಯದರ್ಶಿ ಕೆ.ಎಸ್‌.ಎನ್‌. ದೀಕ್ಷಿತ್‌, ಉಪಾಧ್ಯಕ್ಷ ಆರ್‌. ಲಕ್ಷ್ಮೀಕಾಂತ್‌ ಮಾತನಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT