ಸೋಮವಾರ, 7 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮೆಟ್ರೊ ತಡೆಗೋಡೆಗೆ ಲಾರಿ ಡಿಕ್ಕಿ | ಕೆಂಪಾಪುರ ಬಳಿ ಸಂಚಾರ ದಟ್ಟಣೆ: ಪರದಾಟ

Published : 20 ಸೆಪ್ಟೆಂಬರ್ 2024, 15:52 IST
Last Updated : 20 ಸೆಪ್ಟೆಂಬರ್ 2024, 15:52 IST
ಫಾಲೋ ಮಾಡಿ
Comments

ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ, 10 ಚಕ್ರದ ಲಾರಿಯೊಂದು ಶುಕ್ರವಾರ ಬೆಳಿಗ್ಗೆ ನಾಗವಾರ–ಹೆಬ್ಬಾಳ ಮಾರ್ಗದ ಕೆಂಪಾಪುರ ಬಳಿ ನಿರ್ಮಾಣ ಹಂತದ ಮೆಟ್ರೊ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಈ ಭಾಗದಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು.

ಬೆಳಿಗ್ಗೆ 7ರ ಸುಮಾರಿಗೆ ಕೆಂಪಾಪುರದ ವೆಂಕಟ್‌ ಕೆಫೆ ಬಳಿ ಅಪಘಾತ ಸಂಭವಿಸಿತ್ತು.

ಚಾಲಕನ ನಿಯಂತ್ರಣ ತಪ್ಪಿ ನಿರ್ಮಾಣ ಹಂತದ ತಡೆಗೋಡೆಗೆ ಡಿಕ್ಕಿಯಾಗಿದೆ. ಬಳಿಕ ಲಾರಿ ರಸ್ತೆಗೆ ಅಡ್ಡಲಾಗಿ ನಿಂತಿದ್ದರಿಂದ ಸಂಚಾರ ದಟ್ಟಣೆ ಉಂಟಾಗಿತ್ತು. ಬೆಳಿಗ್ಗೆ ಕೆಲಸಕ್ಕೆ ತೆರಳುವವರು ಹಾಗೂ ಆಸ್ಪತ್ರೆಗೆ ತೆರಳುತ್ತಿದ್ದ ರೋಗಿಗಳು ಪರದಾಡುವಂತಾಯಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಹೆಬ್ಬಾಳದಿಂದ ರಾಮಮೂರ್ತಿ ನಗರದವರೆಗೆ ಒಂದು ತಾಸು ಸಂಚಾರ ವ್ಯತ್ಯಯ ಉಂಟಾಗಿತ್ತು. ವಾಹನಗಳು ನಿಂತಲ್ಲೇ ನಿಂತಿದ್ದವು. ನಂತರ, ಜೆಸಿಬಿ ಹಾಗೂ ಕ್ರೇನ್‌ ತರಿಸಿ ಲಾರಿ ತೆರವು ಮಾಡಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಯಿತು. ಬಿಎಂಆರ್‌ಸಿಎಲ್‌ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಬಳ್ಳಾರಿಯತ್ತ ಲಾರಿ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.

ಲಾರಿ ಚಾಲಕನಿಗೆ ಸಣ್ಣಪುಟ್ಟ ಗಾಯವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಯಿತು ಎಂದು ಸಂಚಾರ ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT