ಬುಧವಾರ, ಆಗಸ್ಟ್ 10, 2022
24 °C

ಅಮೆರಿಕ ಕಂಪನಿಗಳ ಹೂಡಿಕೆಗೆ ಪೂರಕ ನೀತಿ: ಅಶ್ವತ್ಥನಾರಾಯಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಇಡೀ ದೇಶದಲ್ಲಿಯೇ ಮೊತ್ತಮೊದಲಿಗೆ ಎಂಜಿನಿಯರಿಂಗ್‌ ಸಂಶೋಧನೆ ಮತ್ತು ಅಭಿವೃದ್ಧಿ (ಇಆರ್ ಆ್ಯಂಡ್‌ ಡಿ) ನೀತಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದ್ದು, ಇದರಿಂದ ಅಮೆರಿಕ ಕಂಪನಿಗಳ ಹೂಡಿಕೆಗೆ ಹೆಚ್ಚು ಅನುಕೂಲವಾಗಲಿದೆ’ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ ಅಶ್ವತ್ಥನಾರಾಯಣ ಹೇಳಿದರು.

ಕೇರಳದಲ್ಲಿನ ಚುನಾವಣಾ ಪ್ರಚಾರದ ಮಧ್ಯೆ, ಭಾರತ- ಅಮೆರಿಕ ಕಾರ್ಯತಂತ್ರದ ಸಹಭಾಗಿತ್ವ ವೇದಿಕೆ ಹಮ್ಮಿಕೊಂಡಿದ್ದ ವರ್ಚುವಲ್ ಸಭೆಯಲ್ಲಿ ತಿರುವನಂತಪುರದಿಂದಲೇ ಪಾಲ್ಗೊಂಡು ಮಾತನಾಡಿದ ಅವರು, ‘ಕೈಗಾರಿಕಾಭಿವೃದ್ಧಿಗೆ ಈ ನೀತಿ ಹೆಚ್ಚು ಪೂರಕವಾಗಲಿದೆ. ಅತ್ಯುತ್ತಮ ಮಾನವ ಸಂಪನ್ಮೂಲ ಸೃಷ್ಟಿಗೂ ಸಹಾಯವಾಗಲಿದೆ’ ಎಂದು ಅಭಿಪ್ರಾಯಪಟ್ಟರು.

‘ಹೊಸ ಉದ್ಯಮಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರ ಎಲ್ಲ ರೀತಿಯ ಸಹಕಾರ ನೀಡುತ್ತಿದೆ. ರಾಜ್ಯದಲ್ಲಿ ಭಾರತೀಯ ವಿಜ್ಞಾನ ಸಂಸ್ಥೆ, ಭಾರತೀಯತಾಂತ್ರಿಕ ಸಂಸ್ಥೆ ಹಾಗೂ ಅಂತರರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಯಂಥ ಅತ್ಯುತ್ತಮ ಶಿಕ್ಷಣ ಸಂಸ್ಥೆಗಳಿವೆ. ಹೀಗಾಗಿ, ಉತ್ಕೃಷ್ಟ ಮಾನವ ಸಂಪನ್ಮೂಲಕ್ಕೂ ರಾಜ್ಯದಲ್ಲಿ ಕೊರತೆ ಇಲ್ಲ’ ಎಂದರು.

‘ನೀತಿ ಆಯೋಗದ ಆವಿಷ್ಕಾರ ಸೂಚ್ಯಂಕದಲ್ಲಿ ರಾಜ್ಯವು 2019 ಮತ್ತು 2020ರಲ್ಲಿ ಮೊದಲ ಸ್ಥಾನದಲ್ಲಿದೆ. ಅದೇ ರೀತಿ ಎಲೆಕ್ಟ್ರಾನಿಕ್ಸ್‌ ವ್ಯವಸ್ಥೆ ವಿನ್ಯಾಸ ಮತ್ತು ನಿರ್ವಹಣೆ, ಅನಿಮೇಷನ್‌, ವಿಷ್ಯುಯೆಲ್‌ ಎಫೆಕ್ಟ್ಸ್‌, ಗೇಮ್ಸ್‌ ಮತ್ತು ಕಾಮಿಕ್ಸ್‌
ಕ್ಷೇತ್ರದಲ್ಲೂ ರಾಜ್ಯ ದಾಪುಗಾಲಿಡುತ್ತಿದೆ ಎಂದರು.

ವರ್ಚುಯಲ್‌ ಸಭೆಯಲ್ಲಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ಇ.ವಿ. ರಮಣರೆಡ್ಡಿ, ಭಾರತದಲ್ಲಿರುವ ಸ್ಯಾನ್‌ಫ್ರಾನ್ಸಿಸ್ಕೋ ರಾಜ್ಯದ ಕಾನ್ಸುಲ್‌ ಜನರಲ್‌ ಡಾ.ಟಿ.ವಿ. ನಾಗೇಂದ್ರ ಪ್ರಸಾದ್‌, ಉಪ ಕಾನ್ಸುಲ್‌ ಜನರಲ್‌ ರಾಜೇಶ್‌ ನಾಯಕ್‌, ಅಮೆರಿಕ-ಭಾರತ ಕಾರ್ಯತಂತ್ರ ವೇದಿಕೆಯ ಅಧ್ಯಕ್ಷ ಜಾನ್‌ ಚಾಂಬರ್ಸ್‌, ಇದೇ ವೇದಿಕೆಯ ವೆಸ್ಟ್‌ ಕೋಸ್ಟ್‌ ವಿಭಾಗದ ಮುಖ್ಯಸ್ಥೆ ದೀಪ್ತಿ ದೇಸಾಯಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು