ಮಂಗಳವಾರ, 25 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಆಪ್ತಸಮಾಲೋಚನಾ ಕೇಂದ್ರ ತೆರೆಯಲು ಮನವಿ

Published 7 ಜೂನ್ 2024, 14:30 IST
Last Updated 7 ಜೂನ್ 2024, 14:30 IST
ಅಕ್ಷರ ಗಾತ್ರ

ಬೆಂಗಳೂರು: ಹಾಸನದಲ್ಲಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿರುವ ಸಂತ್ರಸ್ತರಿಗೆ ಪ್ರತ್ಯೇಕ ಆಪ್ತಸಮಾಲೋಚನೆ ಹಾಗೂ ಪುನರ್ವಸತಿ ಕೇಂದ್ರ ತೆರಯಬೇಕು ಹಾಗೂ ರಕ್ಷಣೆ ನೀಡಬೇಕೆಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರಿಗೆ ‘ನಾವೆದ್ದು ನಿಲ್ಲದಿದ್ದರೆ ಸಂಘಟನೆ’ಯ ಸದಸ್ಯರು ಶುಕ್ರವಾರ ಮನವಿ ಸಲ್ಲಿಸಿದರು.

‘ಲೈಂಗಿಕ ಸಂತ್ರಸ್ತರ ಗೌಪ್ಯತೆ ಕಾಪಾಡುವ ನಿಟ್ಟಿನಲ್ಲಿ ಸಹಾಯವಾಣಿಯೊಂದು ಪ್ರಾರಂಭಿಸಬೇಕು. ಸಂತ್ರಸ್ತರ ಪರವಾಗಿ ರಾಜ್ಯ ಮಹಿಳಾ ಆಯೋಗವು ನಿಲ್ಲುತ್ತದೆ ಎಂಬ ಭರವಸೆ ನೀಡಿದರೆ, ಈ ಹಗರಣದ ಬಗ್ಗೆ ಇನ್ನಷ್ಟು ದೂರುಗಳು ದಾಖಲಾಗಬಹುದು’ ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

‘ರಾಜ್ಯ ಮಹಿಳಾ ಆಯೋಗವು ಲೈಂಗಿಕ ದೌರ್ಜನ್ಯಕ್ಕೆ ಒಳಗಾದವರಿಗೆ ಮಾನಸಿಕ, ಆರ್ಥಿಕ ಹಾಗೂ ವೈದ್ಯಕೀಯ ಬೆಂಬಲ ನೀಡುವ ವ್ಯವಸ್ಥೆ ಕಲ್ಪಿಸಲು ಮುಂದಾಗಬೇಕು. ರಾಷ್ಟ್ರೀಯ ಕಾನೂನು ಸೇವಾ ಆಯೋಗದ ಪರಿಹಾರ ಯೋಜನೆಯ ಭಾಗವಾಗಿ ಲೈಂಗಿಕ ದೌರ್ಜನ್ಯಕ್ಕೊಳಗಾದವರಿಗೆ ಪರಿಹಾರ ನೀಡಬೇಕು’ ಎಂದು ಹೇಳಿದ್ದಾರೆ.

‘ಸಂತ್ರಸ್ತರೊಬ್ಬರ ಅಪಹರಣ ಪ್ರಕರಣದಲ್ಲಿ ಭಾಗಿಯಾಗಿರುವ ಭವಾನಿ ರೇವಣ್ಣ ಹಾಗೂ ಎಚ್.ಡಿ. ರೇವಣ್ಣ ಅವರಿಗೆ ನೀಡಿರುವ ನಿರೀಕ್ಷಣಾ ಜಾಮೀನು ರದ್ದುಪಡಿಸಬೇಕು’ ಎಂದು ಒತ್ತಾಯಿಸಿದ್ದಾರೆ. 

ಜನವಾದಿ ಮಹಿಳಾ ಸಂಘಟನೆಯ ವಿಮಲಾ ಕೆ.ಎಸ್., ನಾವೆದ್ದು ನಿಲ್ಲದಿದ್ದರೆ ಸಂಘಟನೆಯ ಮಧು ಭೂಷಣ್, ಮಮತಾ ಯಜಮಾನ್, ಗೌರಿ ಮಲ್ಲಿಗೆ, ಗೀತಾ ಮೆನನ್, ವಿನಯ್ ಶ್ರೀನಿವಾಸ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT