ಬುಧವಾರ, ನವೆಂಬರ್ 25, 2020
25 °C

61 ಬಾರಿ ಸಂಚಾರ ನಿಯಮ ಉಲ್ಲಂಘಿಸಿದ ಸವಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೆ.ಆರ್.ಪುರ: 61 ಬಾರಿ ಸಂಚಾರ ನಿಯಮ ಉಲ್ಲಂಘಿಸಿದ ವಾಹನ ಮಾಲೀಕನಿಂದ ಕೆ.ಆರ್.ಪುರ ಸಂಚಾರಿ ಪೊಲೀಸರು ₹32,000 ಸಾವಿರ ದಂಡ ವಸೂಲಿ‌ ಮಾಡಿದ್ದಾರೆ. 

‌ಎಎಸ್‌ಐ ರಾಮ ನಾಯಕ್ ನೇತೃತ್ವದಲ್ಲಿ ದ್ವಿಚಕ್ರ ವಾಹನ ಸಂಖ್ಯೆ KA03JZ3801 ಚಾಲಕನನ್ನು ತಡೆದು ತಪಾಸಣೆ ನಡೆಸಿದಾಗ 61 ಬಾರಿ ಸಂಚಾರ ನಿಯಮವನ್ನು ಉಲ್ಲಂಘಿಸಿರುವುದು ಗೊತ್ತಾಯಿತು. ಈ ದಂಡವನ್ನು ವಾಹನ ಮಾಲೀಕರಿಂದ ವಸೂಲಿ ಮಾಡಿದ್ದಾರೆ. ಈ ವಾಹನವು ಬಿಎಸ್ಎನ್ಎಲ್ ಉದ್ಯೋಗಿಯಾದ ರಾಮಮೂರ್ತಿನಗರ ನಿವಾಸಿ ಸುಬ್ರಹ್ಮಣ್ಯ ಎಂಬುವರಿಗೆ ಸೇರಿದ್ದು.

ದಂಡ ಬಾಕಿ ಉಳಿಸಿಕೊಂಡಿರುವ ವಾಹನ ಮಾಲೀಕರ ಮನೆಗಳಿಗೆ ಮೂರು ದಿನಗಳಿಂದ ತೆರಳಿ ವಸೂಲಿ ಮಾಡಲಾಗುತ್ತಿದೆ ಎಂದು ಸಂಚಾರಿ ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು