‘ಬೆಳಿಗ್ಗೆ 8.30ಕ್ಕೆ ಖಲೀಲ್ ಅವರು ಜಯನಗರದ 4ನೇ ಟಿ ಬ್ಲಾಕ್‌ನಲ್ಲಿ ಆಟೊ ಚಲಾಯಿಸಿಕೊಂಡು ತೆರಳುತ್ತಿದ್ದರು. ಆಟೊ ಮೇಲೆ ಮರದ ಕೊಂಬೆ ಬಿದ್ದಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಖಲೀಲ್ ಅವರನ್ನು ಕೂಡಲೇ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ, ಅವರು ಚಿಕಿತ್ಸೆಗೆ ಸ್ಪಂದಿಸದೇ ಸಂಜೆ ಮೃತಪಟ್ಟಿದ್ದಾರೆ’ ಎಂದು ಪೊಲೀಸರು ತಿಳಿಸಿದರು.