ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರಾವಳಿಯಲ್ಲಿ ಒಂದು ವಾರ ಭಾರಿ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

Published 11 ಜುಲೈ 2023, 15:31 IST
Last Updated 11 ಜುಲೈ 2023, 15:31 IST
ಅಕ್ಷರ ಗಾತ್ರ

ಬೆಂಗಳೂರು: ಕರಾವಳಿಯ ಬಹುತೇಕ ಕಡೆ ಮುಂದಿನ ಒಂದು ವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಕರಾವಳಿಯ ಬಹುತೇಕ ಕಡೆ, ದಕ್ಷಿಣ ಒಳನಾಡಿನ ಹಲವು ಕಡೆ ಹಾಗೂ ಉತ್ತರ ಒಳನಾಡಿನ ಕೆಲವು ಕಡೆ ಬುಧವಾರವೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದ್ದು, ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡಕ್ಕೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ. 

ಗುರುವಾರ ಹಾಗೂ ಶುಕ್ರವಾರ ಕರಾವಳಿಯ ಮೂರು ಜಿಲ್ಲೆಗಳ ಜತೆಗೆ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗೂ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ. 

ಮುಂದಿನ ಒಂದು ವಾರ ದಕ್ಷಿಣ ಒಳನಾಡಿನ ಹಲವೆಡೆ ಹಾಗೂ ಉತ್ತರ ಒಳನಾಡಿನ ಕೆಲವೆಡೆ ಮಳೆ ಮುಂದುವರಿಯಲಿದೆ. ಇದೇ 16ರ ಬಳಿಕ ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಲಿದೆ ಎಂದು ಇಲಾಖೆ ಹೇಳಿದೆ. 

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಒಂದೆರಡು ಬಾರಿ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT