ಬುಧವಾರ, 9 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು: ಕಾರ್ಮಿಕನ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಕೊಲೆ

Published : 24 ಸೆಪ್ಟೆಂಬರ್ 2024, 16:01 IST
Last Updated : 24 ಸೆಪ್ಟೆಂಬರ್ 2024, 16:01 IST
ಫಾಲೋ ಮಾಡಿ
Comments

ಬೆಂಗಳೂರು: ಶ್ರೀನಗರದಲ್ಲಿ ಕಾರ್ಮಿಕರೊಬ್ಬರ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಲಾಗಿದ್ದು, ಈ ಸಂಬಂಧ ಹನುಮಂತನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಜಿತ್‌ ಆರ‍್ಮುಗಂ(35) ಕೊಲೆಯಾದವರು.

‘ತಮಿಳುನಾಡಿನ ಅಜಿತ್‌ ಅವರು ಆರು ತಿಂಗಳ ಹಿಂದಷ್ಟೇ ನಗರಕ್ಕೆ ಬಂದಿದ್ದರು. ಶ್ರೀನಗರದ ಬಾಡಿಗೆ ಮನೆಯಲ್ಲಿ ಅವರು ನೆಲಸಿದ್ದರು. ಮಂಗಳವಾರ ಸಂಜೆ ಅವರನ್ನು ನಿರ್ಮಾಣ ಹಂತದ ಕಟ್ಟಡಕ್ಕೆ ಕರೆದೊಯ್ದ ದುಷ್ಕರ್ಮಿಗಳು, ಕೊಲೆ ಮಾಡಿ ಪರಾರಿ ಆಗಿದ್ದಾರೆ’ ಎಂದು ಪೊಲೀಸರು ಹೇಳಿದರು.

‘ಕೊಲೆಯಾದ ವ್ಯಕ್ತಿಯ ಪರಿಚಯಸ್ಥರೇ ಕೃತ್ಯ ಎಸಗಿರುವ ಶಂಕೆಯಿದ್ದು, ಆರೋಪಿಗಳಿಗೆ ಶೋಧ ನಡೆಸಲಾಗುತ್ತಿದೆ’ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT