ಬೆಂಗಳೂರು: ‘ಕೇಂದ್ರ ಸರ್ಕಾರವು ಮೇಕೆದಾಟು ಯೋಜನೆಯ ವಿಚಾರದಲ್ಲಿ ರಾಜ್ಯಕ್ಕೆ ಮಾಡುತ್ತಿರುವ ದ್ರೋಹವನ್ನು ಖಂಡಿಸುವ ಬದಲು, ತಮಿಳುನಾಡಿನ ಪರ ನಿಂತಿರುವ ರಾಜ್ಯದ ಬಿಜೆಪಿ ನಾಯಕರಿಗೆ ನಾಚಿಕೆಯಾಗಬೇಕು’ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ಬೆಂಗಳೂರು ಘಟಕದ ಅಧ್ಯಕ್ಷ ಮೋಹನ್ ದಾಸರಿ ಟೀಕಿಸಿದರು.

ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,‘ಅಣ್ಣಾಮಲೈ ಅವರು ಮೇಕೆದಾಟು ವಿರುದ್ಧ ಮಾಡಿದ್ದ ಟ್ವೀಟ್‌ಗೆ ಕರ್ನಾಟಕದವರಾದಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಪ್ರತಿಕ್ರಿಯಿಸುವ ಮೂಲಕ ಬೆಂಬಲಿಸಿರುವುದು ಖಂಡನೀಯ. ರಾಜ್ಯದ ಜನರ ಕ್ಷಮೆ ಯಾಚಿಸುವಂತೆ ಅವರಿಗೆ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೂಚಿಸಬೇಕು’ ಎಂದು ಆಗ್ರಹಿಸಿದರು.

‘ಬೆಂಗಳೂರಿನ ಅನೇಕ ವಾರ್ಡ್‌ಗಳಲ್ಲಿ ಈಗಾಗಲೇ ಕುಡಿಯುವ ನೀರಿಗೆ ಅಭಾವವಿದ್ದು, ಭವಿಷ್ಯದಲ್ಲಿ ದೊಡ್ಡ ಪ್ರಮಾಣದ ಹಾಹಾಕಾರ ಸೃಷ್ಟಿಯಾಗಲಿದೆ. ಇದಕ್ಕೆ ಮೇಕೆದಾಟು ಯೋಜನೆಯೇ ಪರಿಹಾರ. ಈ ಯೋಜನೆಯಿಂದ ತಮಿಳುನಾಡಿಗೆ ತೊಂದರೆ ಇಲ್ಲ. ಆದ್ದರಿಂದ ಈ ಯೋಜನೆ ಅನುಷ್ಠಾನಕ್ಕೆ ಯಾರ ಅಪ್ಪಣೆಯೂ ರಾಜ್ಯಕ್ಕೆ ಬೇಕಾಗಿಲ್ಲ. ಕೇಂದ್ರ ಸರ್ಕಾರದ ಈ ನಡೆಯ ವಿರುದ್ಧ ರಾಜ್ಯ ಬಿಜೆಪಿ ನಾಯಕರು ದನಿ ಎತ್ತಲಿ’ ಎಂದು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.