ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಎಪಿಯಿಂದ ‘ಫೀಸ್‌ ಇಳಿಸಿ; ಮಕ್ಕಳ ಭವಿಷ್ಯ ಉಳಿಸಿ’ ಅಭಿಯಾನ

Last Updated 2 ಜುಲೈ 2021, 12:22 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಉಂಟಾಗಿರುವ ಶೈಕ್ಷಣಿಕ ಗೊಂದಲಗಳ ನಿವಾರಣೆಗಾಗಿ ಸರ್ಕಾರದ ಮೇಲೆ ಒತ್ತಡ ಹೇರುವ ಉದ್ದೇಶದಿಂದಆಮ್‌ ಆದ್ಮಿ ಪಕ್ಷವು (ಎಎಪಿ) ‘ಫೀಸ್‌ ಇಳಿಸಿ; ಮಕ್ಕಳ ಭವಿಷ್ಯ ಉಳಿಸಿ’ ಅಭಿಯಾನ ಹಮ್ಮಿಕೊಂಡಿದೆ.

ಈ ಕುರಿತು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೆಂಗಳೂರು ನಗರ ಅಧ್ಯಕ್ಷ ಮೋಹನ್‌ ದಾಸರಿ‘ಖಾಸಗಿ ಶಾಲೆಗಳ ಶುಲ್ಕವನ್ನು ಶೇ.30ರಷ್ಟು ಇಳಿಸಿ ಪೋಷಕರಿಗೆ ಸಹಾಯ ಮಾಡಿ. ಖಾಸಗಿ ಶಾಲೆಗಳ ಶಿಕ್ಷಕರಿಗೆ ಸಂಬಳ ಕೊಟ್ಟು ಶಾಲೆಗಳು ಪುನರಾರಂಭವಾಗಲು ಅನುವು ಮಾಡಿಕೊಡಿ. ಶುಲ್ಕ ನಿಯಂತ್ರಣ ಪ್ರಾಧಿಕಾರ ರಚಿಸಿ. ಆ ಮೂಲಕ ಮಕ್ಕಳು ಶಿಕ್ಷಣ ವಂಚಿತರಾಗುವುದನ್ನು ತಪ್ಪಿಸಿ’ ಎಂದು ಒತ್ತಾಯಿಸಿದರು.

‘ಸರ್ಕಾರಿ ಶಾಲೆಗಳ ಸ್ಥಿತಿ ಶೋಚನೀಯವಾಗಿದೆ. ಹೀಗಾಗಿ ಪೋಷಕರು ಖಾಸಗಿ ಶಾಲೆಗಳ ಕಡೆಗೆ ಮುಖಮಾಡಿದ್ದಾರೆ. ಅವರು ಕೇಳಿದಷ್ಟು ಶುಲ್ಕ ಕೊಡುವಂತಾಗಿದೆ. ಈ ಕುರಿತು ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದ ಈ ಅಭಿಯಾನ ಆಯೋಜಿಸಲಾಗಿದೆ’ ಎಂದರು.

‘ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಅವರು ಇದೇ 5ರಂದು ಬೆಳಿಗ್ಗೆ 9 ಗಂಟೆಗೆ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ಸಂಪಂಗಿರಾಮನಗರ ವಾರ್ಡ್‌ನಲ್ಲಿ ನಿಗದಿಯಾಗಿರುವ ಕಾರ್ಯಕ್ರಮದಲ್ಲಿ ಪ್ರಚಾರ ಸಮಿತಿ ಅಧ್ಯಕ್ಷೆ ಶಾಂತಲಾ ದಾಮ್ಲೆ ಅವರೂ ಪಾಲ್ಗೊಳ್ಳಲಿದ್ದಾರೆ. ಅಭಿಯಾನದ ಅಂಗವಾಗಿ ಪಕ್ಷದ ಕಾರ್ಯಕರ್ತರು ರಾಜ್ಯದ ಎಲ್ಲಾ ಜಿಲ್ಲೆ ಹಾಗೂ ತಾಲ್ಲೂಕುಗಳಲ್ಲಿ ಮನೆ ಮನೆಗೆ ತೆರಳಿ ಕನಿಷ್ಠ 5 ಲಕ್ಷ ಮಂದಿಯ ಸಹಿ ಸಂಗ್ರಹಿಸಲಿದ್ದಾರೆ. 15 ದಿನ ಈ ಅಭಿಯಾನ ನಡೆಯಲಿದೆ. ಇದರ ಭಾಗವಾಗಲು 7669100500ಗೆ ಮಿಸ್‌ ಕಾಲ್‌ ನೀಡಿ’ ಎಂದು ಮನವಿ ಮಾಡಿದರು.

ಪಕ್ಷದ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ಸದಂ, ಪ್ರಕಾಶ್‌, ಉಷಾ ಮೋಹನ್‌, ವಿಜಯ್‌ ಶಾಸ್ತ್ರಿಮಠ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT