ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಎಸ್‌ಆರ್‌ಟಿಸಿ ಆಸ್ಪತ್ರೆ ಖಾಸಗೀಕರಣ: ಎಎಪಿ ಕಿಡಿ

Last Updated 26 ಜುಲೈ 2022, 21:35 IST
ಅಕ್ಷರ ಗಾತ್ರ

ಬೆಂಗಳೂರು: ‘ಜಯನಗರದಲ್ಲಿರುವ ಕೆಎಸ್‌ಆರ್‌ಟಿಸಿ ಆಸ್ಪತ್ರೆಯನ್ನು ಖಾಸಗೀಕರಣಗೊಳಿಸಲು ಸಂಸದ ತೇಜಸ್ವಿ ಸೂರ್ಯ ಯತ್ನಿಸಿದ್ದಾರೆ’ ಎಂದು ಆಮ್‌ ಆದ್ಮಿ ಪಕ್ಷದ ಬೆಂಗಳೂರು ನಗರ ಘಟಕದ ಅಧ್ಯಕ್ಷ ಮೋಹನ್‌ ದಾಸರಿ ದೂರಿದ್ದಾರೆ.

‘ಹಲವು ವರ್ಷಗಳಿಂದ ಕೆಎಸ್‌ಆರ್‌ಟಿಸಿ ಆಸ್ಪತ್ರೆಯಲ್ಲಿ ನೌಕರರು ಅಗತ್ಯ ಚಿಕಿತ್ಸೆಗಳನ್ನು ಪಡೆಯುತ್ತಿದ್ದಾರೆ. ಸಾರಿಗೆ ನೌಕರರಿಗೆ ಇರುವ ಏಕೈಕ ಆಸ್ಪತ್ರೆ ಇದಾಗಿದೆ. ಇನ್ನೂ ಒಂದು ಆಸ್ಪತ್ರೆ ತೆರೆದು ಹೆಚ್ಚಿನ ಸೌಲಭ್ಯ ಕಲ್ಪಿಸುವ ಬಗ್ಗೆ ಸರ್ಕಾರ ಯೋಚಿಸಬೇಕು. ಆದರೆ, ಸಂಸದ ತೇಜಸ್ವಿ ಸೂರ್ಯ ಅವರು ಈಗಿರುವ ಆಸ್ಪತ್ರೆಯನ್ನೂ ಖಾಸಗೀಕರಣದ ಹೆಸರಿನಲ್ಲಿ ಮಾರಾಟ ಮಾಡಲು ಹೊರಟಿರುವುದು ಖಂಡನೀಯ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ಕಮಿಷನ್‌ ಆಸೆಗಾಗಿ ತೇಜಸ್ವಿ ಸೂರ್ಯ ಈ ಆಸ್ಪತ್ರೆಯನ್ನು ಖಾಸಗಿಯವರಿಗೆ ನೀಡಲು ಮುಂದಾಗಿದ್ದಾರೆ. ಇದರಿಂದಾಗಿ ಅಲ್ಲಿರುವ ನೌಕರರು ಕೆಲಸ ಕಳೆದುಕೊಳ್ಳುವ ಅಪಾಯವಿದೆ. ಸಾರಿಗೆ ನೌಕರರು ಸಣ್ಣಪುಟ್ಟ ಚಿಕಿತ್ಸೆಗೂ ದುಬಾರಿ ಬೆಲೆ ತೆರಬೇಕಾದ ಸ್ಥಿತಿ ಬಂದರೂ ಆಶ್ಚರ್ಯವಿಲ್ಲ. ಸರ್ಕಾರವು ಹಲವು ವರ್ಷಗಳಿಂದ ಕಾಪಾಡಿಕೊಂಡಿರುವ ಸಂಸ್ಥೆಗಳನ್ನು ಬಿಜೆಪಿ ಒಂದೊಂದಾಗಿಯೇ ಮಾರಾಟ ಮಾಡುತ್ತಿದೆ’ ಎಂದು ತಿಳಿಸಿದ್ದಾರೆ. ‘ಕೆಎಸ್‌ಆರ್‌ಟಿಸಿ ನೌಕರರು ಏಳನೇ ವೇತನ ಶ್ರೇಣಿಗಾಗಿ ಹಲವು ವರ್ಷಗಳಿಂದ ಹೋರಾಟ ಮಾಡುತ್ತಿದ್ದಾರೆ. ಸರಿಯಾದ ಪಿಂಚಣಿ, ವಿಮಾ ಸೌಲಭ್ಯ ಇಲ್ಲದೇ ತೊಂದರೆ ಅನುಭವಿಸುತ್ತಿದ್ದಾರೆ. ಈ ಬಗ್ಗೆ ತುಟಿ ಬಿಚ್ಚದ ಸಂಸದ ತೇಜಸ್ವಿ ಸೂರ್ಯ ಅವರು ಕೆಎಸ್‌ಆರ್‌ಟಿಸಿ ಆಸ್ಪತ್ರೆಯನ್ನು ಮಾರಾಟ ಮಾಡಲು ನಿರ್ಧರಿಸಿರುವುದು ನಾಚಿಕೆಗೇಡಿನ ಸಂಗತಿ. ಈ ನಿರ್ಧಾರದಿಂದ ಹಿಂದೆ ಸರಿಯಬೇಕು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT