ಶನಿವಾರ, 15 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ಒತ್ತುವರಿ ತೆರವಿಗೆ ಎಎಪಿ ಆಗ್ರಹ

Published 25 ಮೇ 2024, 15:08 IST
Last Updated 25 ಮೇ 2024, 15:08 IST
ಅಕ್ಷರ ಗಾತ್ರ

ಬೆಂಗಳೂರು: ‘ಪ್ರತಿ ಮಳೆಗಾಲದಲ್ಲೂ ನಗರದಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರುತ್ತಿದೆ. ಯಾವುದೇ ಸರ್ಕಾರವು ರಾಜಕಾಲುವೆ ಒತ್ತುವರಿ ತೆರವಿಗೆ ಗಮನಹರಿಸುವುದಿಲ್ಲ. ಒತ್ತುವರಿ ತೆರವು ಮಾಡದೇ ಇರುವುದು ಸಮಸ್ಯೆಗೆ ಕಾರಣ’ ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ ಆರೋಪಿಸಿದರು.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು, ‘ಪಕ್ಷದ ರಾಜ್ಯ ಅಧ್ಯಕ್ಷ ‘ಮುಖ್ಯಮಂತ್ರಿ’ ಚಂದ್ರು ಅವರು ಈಚೆಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಗೆ ಪತ್ರ ಬರೆದು ಅತಿವೃಷ್ಟಿಯಿಂದ ಸಮಸ್ಯೆಯಾಗುವುದನ್ನು ತಪ್ಪಿಸಲು ಕ್ರಮ ಕೈಗೊಳ್ಳುವಂತೆ ಕೋರಿದ್ದರು. ಇದಕ್ಕೆ ಇದುವರೆಗೂ ಪ್ರತಿಕ್ರಿಯೆ ಬಂದಿಲ್ಲ. ಇದು ಸರ್ಕಾರದ ನಿರ್ಲಕ್ಷ್ಯತನದ ಪರಮಾವಧಿ’ ಎಂದು ಟೀಕಿಸಿದರು.

‘ಬಿಜೆಪಿ ಸರ್ಕಾರ ಇದ್ದಾಗ ಪ್ರವಾಹ ಪರಿಸ್ಥಿತಿ ಉಂಟಾಗಿತ್ತು. ಈಗ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೂ ಯಾವುದೇ ಪ್ರಯೋಜನ ಆಗಿಲ್ಲ. ಬ್ರ್ಯಾಂಡ್ ಬೆಂಗಳೂರು ಕತೆ ಏನಾಯಿತು ಎಂಬುದು ಗೊತ್ತಿಲ್ಲ. ಒಂದು ವರ್ಷದಿಂದ ನಗರದಲ್ಲಿ ಯಾವುದೇ ಕೆಲಸ ಆಗುತ್ತಿಲ್ಲ. ಬೆಂಗಳೂರಿನ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಸರ್ಕಾರ ವಿಫಲವಾಗಿದೆ. ಆಗದಿದ್ದರೆ ಅಧಿಕಾರದಿಂದ ನಿರ್ಗಮಿಸಲಿ‘ ಎಂದರು.

ನಗರ ಘಟಕದ ಅಧ್ಯಕ್ಷ ಸತೀಶ್ ಕುಮಾರ್‌, ‘ಮಳೆಯಿಂದ ಸಾಕಷ್ಟು ಸಮಸ್ಯೆ ಆಗುತ್ತಿದ್ದರೂ ಕ್ರಮ ಕೈಗೊಳ್ಳುತ್ತಿಲ್ಲ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT