ಭಾನುವಾರ, 10 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದ ಜಾತಿ ಗಣತಿ ವರದಿ ಏನಾಯಿತು?: ಎಎಪಿ

Published 3 ಅಕ್ಟೋಬರ್ 2023, 15:23 IST
Last Updated 3 ಅಕ್ಟೋಬರ್ 2023, 15:23 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಜ್ಯದಲ್ಲಿ ₹180 ಕೋಟಿ ವೆಚ್ಚದಲ್ಲಿ ನಡೆದಿದ್ದ ಜಾತಿ ಗಣತಿ ವರದಿ ಏನಾಯಿತು’ ಎಂದು ಆಮ್‌ ಆದ್ಮಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ‘ಮುಖ್ಯಮಂತ್ರಿ’ ಚಂದ್ರು ಪ್ರಶ್ನಿಸಿದರು.

‘ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದಾಗ 2013ರಲ್ಲಿ ಶಾಶ್ವತ ಹಿಂದುಳಿದ ಆಯೋಗಕ್ಕೆ ರಾಜ್ಯದ ಜಾತಿಗಣತಿ ನಡೆಸಲು ಆದೇಶ ನೀಡಲಾಗಿತ್ತು. 2015ರಲ್ಲಿ ಜಾತಿ ಗಣತಿ ವರದಿ ಪೂರ್ಣಗೊಂಡಿತ್ತು. ಹಿಂದುಳಿದ ವರ್ಗಗಳ ಆಯೋಗ ಮನೆಮನೆಗೆ ತೆರಳಿ ಗಣತಿ ನಡೆಸಿತ್ತು. ಆಯೋಗವು ವರದಿಯನ್ನು ಇನ್ನೂ ಸರ್ಕಾರಕ್ಕೆ ಸಲ್ಲಿಸಿಲ್ಲ. ಅಂದು ಸಿದ್ದರಾಮಯ್ಯ ಅವರೇ ಆ ವರದಿಯನ್ನು ರಾಜಕೀಯ ಒತ್ತಡಗಳಿಂದ ಸ್ವೀಕರಿಸಲಿಲ್ಲ’ ಎಂದು ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ದೂರಿದರು.

ಹಿಂದುಳಿದ ವರ್ಗಗಳವರಿಗೆ ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿ ಕಲ್ಪಿಸಲು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮುಂದಾಗಿದ್ದಾರೆ ಎಂದಿರುವ ಚಂದ್ರು, ರಾಜ್ಯದಲ್ಲಿ ಜಾತಿ ಗಣತಿ ವರದಿ ಅನುಷ್ಠಾನ ಯಾವಾಗ ಎಂದು ಪ್ರಶ್ನಿಸಿದ್ದಾರೆ.

‘ಜಾತಿ ಗಣತಿ ಬಹಿರಂಗವಾದರೆ ರಾಜಕೀಯದಲ್ಲಿ ಏರುಪೇರು ಆಗಲಿದೆ ಎನ್ನುವ ಕಾರಣಕ್ಕೆ ತಡೆಹಿಡಿಯಲಾಗಿದೆ. ವರದಿ ಸಿದ್ದವಾಗಿದೆ ಎಂದು ಸರ್ಕಾರಕ್ಕೆ ಕಾರ್ಯದರ್ಶಿ ಪತ್ರ ಬರೆದಿದ್ದರೂ ವರದಿ ಸ್ವೀಕರಿಸಿಲ್ಲ. 7 ಸದಸ್ಯರಲ್ಲಿ ಇಬ್ಬರು ಸಹಿ ಹಾಕಿಲ್ಲ. ಆಯೋಗದ ಅಧ್ಯಕ್ಷ ಕಾಂತರಾಜು ಅವರೇ ಸಹಿ ಹಾಕಿಲ್ಲ ಎನ್ನಲಾಗುತ್ತಿದೆ. ಸಿದ್ದರಾಮಯ್ಯ ಅವರ ಬಳಿಕ ಎಚ್‌.ಡಿ.ಕುಮಾರಸ್ವಾಮಿ, ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಸಹ ಈ ವರದಿ ಸ್ವೀಕರಿಸದೆ ತಿರಸ್ಕಾರ ಮಾಡಿದ್ದಾರೆ’ ಎಂದು ಆಪಾದಿಸಿದರು.

‘ಸಿದ್ದರಾಮಯ್ಯ ಅವರೇ ಈಗ ಮತ್ತೆ ಮುಖ್ಯಮಂತ್ರಿ ಆಗಿದ್ದಾರೆ. ತುರ್ತಾಗಿ ವರದಿ ಸ್ವೀಕರಿಸಿ ವಿಧಾನಸಭೆಯಲ್ಲಿ ಮಂಡಿಸಲಿ. ನಂತರ, ಜನರು ತೀರ್ಮಾನ ಮಾಡುತ್ತಾರೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT