ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಗಡಿ, ಜಲ ಸಮಸ್ಯೆಗಳನ್ನು ಇತ್ಯರ್ಥ ಪಡಿಸಿ’

Last Updated 5 ಡಿಸೆಂಬರ್ 2022, 16:32 IST
ಅಕ್ಷರ ಗಾತ್ರ

ಬೆಂಗಳೂರು: ‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಧಮ್ಮು, ತಾಕತ್ತು ಇದ್ದರೆ ನಾಲ್ಕು ಎಂಜಿನ್‌ಗಳ ಸರ್ಕಾರವನ್ನು ಬಳಸಿಕೊಂಡು ಗಡಿ, ಜಲ ಸಮಸ್ಯೆಗಳನ್ನು ಇತ್ಯರ್ಥ ಪಡಿಸಬೇಕು’ ಎಂದು ಆಮ್‌ ಆದ್ಮಿ ಪಕ್ಷದ ಪ್ರಚಾರ ಸಮಿತಿ ಅಧ್ಯಕ್ಷ ‘ಮುಖ್ಯಮಂತ್ರಿ’ ಚಂದ್ರು ಸವಾಲು ಹಾಕಿದರು.

‘ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ಸರ್ಕಾರಗಳು ಬಂದಾಗಲೆಲ್ಲ ಗಡಿ ಮತ್ತು ನೀರಿನ ಸಮಸ್ಯೆಗಳನ್ನು ರಾಜಕೀಯ ಕುತಂತ್ರಕ್ಕೆ ಬಳಸಿಕೊಳ್ಳಲಾಗುತ್ತದೆ. ಗಡಿ ವಿಚಾರದಲ್ಲಿ ಕರ್ನಾಟಕದ್ದು ಕೇವಲ ರಕ್ಷಣಾತ್ಮಕ ಪ್ರತಿಕ್ರಿಯೆಯಾಗಿದ್ದರೆ, ಪಕ್ಕದ ರಾಜ್ಯಗಳದ್ದು ಪ್ರಚೋದನಾತ್ಮಕ ಹಾಗೂ ಆಕ್ರಮಣಕಾರಿ ಪ್ರತಿಕ್ರಿಯೆಯಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಮಸ್ಯೆಯನ್ನು ಜೀವಂತವಾಗಿಡಲು ಹಪಹಪಿಸುತ್ತಿದ್ದು, ಬಿಜೆಪಿಯ ಹಾಗೂ ವೈಯಕ್ತಿಕ ವರ್ಚಸ್ಸು ಹೆಚ್ಚಿಸಿಕೊಳ್ಳಲು ವಿವಾದವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ’ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

2018ರಲ್ಲಿ ಉತ್ತರ ಕರ್ನಾಟಕಕ್ಕೆ ಬಂದಿದ್ದ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ‘ಬಿಜೆಪಿ ಅಧಿಕಾರಕ್ಕೆ ಬಂದರೆ ಮಹದಾಯಿ ವಿವಾದ ಬಗೆಹರಿಸುವುದಾಗಿ ಹೇಳಿದ್ದರು. ಸದ್ಯ ಕರ್ನಾಟಕ, ಗೋವಾ, ಮಹಾರಾಷ್ಟ್ರ ಹಾಗೂ ಕೇಂದ್ರದಲ್ಲಿ ಬಿಜೆಪಿಯ ನಾಲ್ಕು ಎಂಜಿನ್‌ ಸರ್ಕಾರವಿದ್ದರೂ ವಿವಾದ ಬಗೆಹರಿಸುವ ಬದಲು ರಾಜಕೀಯ ಲಾಭಕ್ಕಾಗಿ ಸಮಸ್ಯೆಯನ್ನು ದೊಡ್ಡದು ಮಾಡಲಾಗುತ್ತಿದೆ ಎಂದು ತಿಳಿಸಿದರು.

‘ಕನ್ನಡ ಅಭಿವೃದ್ಧಿ ಪ್ರಾಧಿಕಾರ ನಾಡಿನ ಆಸ್ಮಿತೆ ಕಾಪಾಡುವ ಸಂಸ್ಥೆ. ಇದು ಬಹುಕಾಲದಿಂದ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವ ಕಾರ್ಯಕ್ರಮಗಳನ್ನು ನಡೆಸುತ್ತಾ ಮತ್ತು ಅದಕ್ಕೆ ಪೂರಕವಾದ ವಾತಾವರಣ ನಿರ್ಮಿಸುತ್ತಾ ಬಂದಿದೆ. ಸಾರ್ವಜನಿಕ ವಲಯದಲ್ಲಿ ಕನ್ನಡ ಭಾಷೆಗೆ ಅಪಮಾನ ಅಥವಾ ಅನ್ಯಾಯವಾದಾಗ ಪ್ರಾಧಿಕಾರ ಪ್ರಶ್ನೆ ಮಾಡಿದೆ. ಅಧಿಕಾರಿಗಳು, ಜನಪ್ರತಿನಿಧಿಗಳು, ಸಚಿವರನ್ನೂ ಬಿಟ್ಟಿಲ್ಲ. ಇದು ಮುಂದುವರಿಯಬೇಕಾದರೆ ರಾಜಕೀಯೇತರ ವ್ಯಕ್ತಿಯನ್ನು ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಕ ಮಾಡಬೇಕು. ಈ ಕುರಿತು ಶೀಘ್ರವೇ ಮುಖ್ಯಮಂತ್ರಿ ಅವರಿಗೆ ಪತ್ರ ಬರೆಯುತ್ತೇನೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT