ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖಾಸಗಿ ಶಿಕ್ಷಣ ಸಂಸ್ಥೆಗಳ ಶುಲ್ಕ ದಂಧೆಗೆ ಕಡಿವಾಣ ಹಾಕಿ: ಎಎಪಿ

Published 8 ಮೇ 2024, 14:35 IST
Last Updated 8 ಮೇ 2024, 14:35 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಜ್ಯದಲ್ಲಿ ಸರ್ಕಾರಿ ಶಿಕ್ಷಣ ವ್ಯವಸ್ಥೆ ಹದಗೆಟ್ಟಿದ್ದು, ಬೇಸತ್ತ ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸುತ್ತಿದ್ದಾರೆ. ಇದರಿಂದ ಖಾಸಗಿ ಶಿಕ್ಷಣ ಸಂಸ್ಥೆಗಳ ಶುಲ್ಕ ದಂಧೆ ಮಿತಿಮೀರಿದೆ. ಇದಕ್ಕೆ ಸರ್ಕಾರ ಕಡಿವಾಣ ಹಾಕಬೇಕು’ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ. ಸದಂ ಆಗ್ರಹಿಸಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ದೆಹಲಿಯಲ್ಲಿ ಖಾಸಗಿ ಶಾಲೆಗಳ ಮೇಲೆ ಕಟ್ಟುನಿಟ್ಟಿನ ನಿಯಂತ್ರಣ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳು ಪ್ರತಿವರ್ಷ ಶೇ 15ರಷ್ಟು ಶುಲ್ಕ ಹೆಚ್ಚಳ ಮಾಡುವ ಕುರಿತು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿವೆ. ಆದರೆ, ರಾಜ್ಯದಲ್ಲಿ ಶುಲ್ಕ ನಿಯಂತ್ರಣ ಪ್ರಾಧಿಕಾರ ಇದೆಯಾ ಎನ್ನುವ ಪ್ರಶ್ನೆ ಮೂಡುತ್ತಿದೆ. ಖಾಸಗಿ ಶಾಲೆಗಳಿಗೆ ಶುಲ್ಕ ನಿಗದಿ ಮಾಡುವ ಅಧಿಕಾರ ರಾಜ್ಯ ಸರ್ಕಾರಕ್ಕಿಲ್ಲ ಎಂದು ಹೈಕೋರ್ಟ್‌ ಮಹತ್ವದ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರ ಹೈಕೋರ್ಟ್‌ ಮುಂದೆ ಸಮರ್ಪಕ ವಾದ ಮಂಡಿಸದಿರುವುದೇ ಇದಕ್ಕೆ ಕಾರಣ’ ಎಂದು ತಿಳಿಸಿದರು.

‘ರಾಜ್ಯ ಸರ್ಕಾರ ಈ ಶೈಕ್ಷಣಿಕ ವರ್ಷದಲ್ಲಾದರೂ ಖಾಸಗಿ ಶಾಲೆಗಳ ಶುಲ್ಕ ದಂಧೆಯಿಂದ ಪೋಷಕರನ್ನು ರಕ್ಷಿಸಲು ಕ್ರಮ ಕೈಗೊಳ್ಳಬೇಕು. ಖಾಸಗಿ ಶಾಲೆಗಳ ವಸೂಲಿಗೆ ಶುಲ್ಕ ನಿಯಂತ್ರಣ ಪ್ರಾಧಿಕಾರವು ತಡೆ ನೀಡಬೇಕು. ಇದೀಗ ಚುನಾವಣೆಯು ಮುಗಿದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತ ಗಮನಹರಿಸಬೇಕಿದೆ. ಕೂಡಲೇ ಸಭೆ ಕರೆದು, ನ್ಯಾಯಾಲಯದ ಆದೇಶದ ಕುರಿತು ಕಾನೂನು ತಜ್ಞರೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

ಎಎಪಿ ರಾಜ್ಯ ಖಜಾಂಚಿ ಪ್ರಕಾಶ್ ನೆಡುಂಗಡಿ, ರಾಜ್ಯ ಯುವ ಘಟಕದ ರಾಜ್ಯಾಧ್ಯಕ್ಷ ಲೋಹಿತ್ ಹನುಮಾಪುರ ಭಾಗವಹಿಸಿದ್ದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT