ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂತೋಷ್ ಪಾಟೀಲ ಪ್ರಕರಣ: ನ್ಯಾಯಾಂಗ ತನಿಖೆಗೆ ಆಗ್ರಹ

Last Updated 23 ಜುಲೈ 2022, 20:57 IST
ಅಕ್ಷರ ಗಾತ್ರ

ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪನವರಿಗೆ ಕ್ಲೀನ್‌ಚಿಟ್‌ ನೀಡಿರುವ ಪೊಲೀಸರ ನಡೆಯನ್ನು ಖಂಡಿಸಿ ಆಮ್‌ ಆದ್ಮಿ ಪಕ್ಷದ(ಎಎಪಿ) ಕಾರ್ಯಕರ್ತರು ಶನಿವಾರ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದರು.

ಎಎಪಿ ನಗರ ಘಟಕದ ರಾಜಕೀಯ ಚಟುವಟಿಕೆಗಳ ಅಧ್ಯಕ್ಷ ಚನ್ನಪ್ಪಗೌಡ ನೆಲ್ಲೂರು ಮಾತನಾಡಿ, ‘ಕಳಂಕಿತ ಕೆ.ಎಸ್‌. ಈಶ್ವರಪ್ಪ ಅವರನ್ನು ಪುನಃ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಲು ರಾಜ್ಯ ಬಿಜೆಪಿ ಸರ್ಕಾರ ಹುನ್ನಾರ ನಡೆಸಿದೆ. ಇದಕ್ಕಾಗಿ ಪೊಲೀಸರ ಮೇಲೆ ಒತ್ತಡ ಹೇರಿ ಕ್ಲೀನ್‌ಚಿಟ್‌ ನೀಡಲಾಗಿದೆ. ಸಂತೋಷ್‌ ಪಾಟೀಲ ಆತ್ಮಹತ್ಯೆಗೂ ಮುನ್ನ ಈಶ್ವರಪ್ಪನವರ ವಿರುದ್ಧ ವಾಟ್ಸ್‌ ಆ್ಯಪ್‌ನಲ್ಲಿ ಡೆತ್‌ನೋಟ್ ಕಳುಹಿಸಿರುವುದನ್ನು ಪೊಲೀಸರೇ ದೃಢಪಡಿಸಿದ್ದರು. ಆದರೆ ಈಗ ಈಶ್ವರಪ್ಪ ಅವರ ವಿಚಾರಣೆ ನಡೆಸದೇ ಕ್ಲೀನ್ ಚಿಟ್‌ ನೀಡಿರುವುದು ಖಂಡನೀಯ’ ಎಂದರು.

‘ರಾಜ್ಯ ಪೊಲೀಸ್ ಇಲಾಖೆ ನಡೆಸಿರುವ ದೋಷಪೂರಿತ ವರದಿಯನ್ನು ಹಿಂಪಡೆ ಯಬೇಕು. ಡೆತ್‌ನೋಟ್‌ ಆಧಾರವಾಗಿಟ್ಟುಕೊಂಡು ಈಶ್ವರ‍ಪ್ಪನವರನ್ನು ಬಂಧಿಸಿ ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ನಡೆಸಬೇಕು‘ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT