ಬೆಂಗಳೂರು: ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಒಪ್ಪಂದ ವಿರೋಧಿಸಿ ಆಮ್ ಆದ್ಮಿ ಪಕ್ಷದ ವತಿಯಿಂದ ಸೋಮವಾರ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಲಾಯಿತು.

ಇದೇ ವೇಳೆ ತರಕಾರಿಗಳನ್ನು ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಕಾರರು, ‘ಸ್ವದೇಶಿ ಬಳಸಿ, ವಿದೇಶಿ ತಿರಸ್ಕರಿಸಿ’, ‘ವ್ಯಾಪಾರ ಒಪ್ಪಂದ: ಅಮೆರಿಕಕ್ಕೆ ಸಿಹಿ, ಭಾರತಕ್ಕೆ ಕಹಿ‘, ‘ಮೋದಿಜಿ ಚೆಲ್ಲಾಟ; ದೇಶದ ರೈತರಿಗೆ ಸಂಕಟ’ ಎಂಬ ಫಲಕಗಳನ್ನು ಪ್ರದರ್ಶಿಸಿದರು.

ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ‘ಮುಖ್ಯಮಂತ್ರಿ’ ಚಂದ್ರು ಮಾತನಾಡಿ, ‘ಭಾರತ ಪರಂಪರಾನುಗತವಾಗಿ ಕೃಷಿ ಕ್ಷೇತ್ರವನ್ನು ತನ್ನ ಆರ್ಥಿಕತೆಯ ಬೆನ್ನೆಲುಬಾಗಿ ಕಾಪಾಡಿಕೊಂಡು ಬಂದಿದೆ. ಕೋಟ್ಯಂತರ ಸಂಖ್ಯೆಯ ಸಣ್ಣ ರೈತರು ಇಂದಿಗೂ ದೇಶದ ಆರ್ಥಿಕತೆಗೆ ಬೆನ್ನೆಲುಬಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಅಮೆರಿಕದ ಒತ್ತಡ ಹಾಗೂ ಹಿತಾಸಕ್ತಿಗೆ ಬಲಿಯಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದೇಶಗಳ ನಡುವಿನ ವ್ಯಾಪಾರ ಒಪ್ಪಂದವನ್ನು ಐತಿಹಾಸಿಕವೆಂದು ಹೇಳುತ್ತಲೇ ದೇಶದ ರೈತರಿಗೆ ಮರಣ ಶಾಸನ ಬರೆದಿದ್ದಾರೆ’ ಎಂದು ಕಳವಳ ವ್ಯಕ್ತಪಡಿಸಿದರು.

‘ದೇಶದಲ್ಲಿ 85 ರಿಂದ 90 ಕೋಟಿ ಜನರು ಕೃಷಿ ಚಟುವಟಿಕೆಗಳು ಹಾಗೂ ಕೃಷಿ ಸಂಬಂಧಿತ ಉದ್ಯೋಗಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಬೆಳೆಗಳನ್ನು ವಿದೇಶಗಳಿಗೆ ರಫ್ತು ಮಾಡುವ ಮೂಲಕ ಉತ್ತಮ ಬೆಲೆ ನಿರೀಕ್ಷಿಸಬಹುದಾಗಿತ್ತು. ಆದರೆ, ಈ ವ್ಯಾಪಾರ ಒಪ್ಪಂದದಲ್ಲಿ ಯಾಂತ್ರಿಕೃತ ವ್ಯವಸ್ಥೆಯಿಂದ ಬೆಳೆದಿರುವ ಅಮೆರಿಕ ದೇಶದ ಬೆಳೆಗಳಿಗೆ ಭಾರತವು ಶೂನ್ಯ ಅಥವಾ ಕಡಿಮೆ ಸುಂಕದ ರೂಪದಲ್ಲಿ ಮಾರುಕಟ್ಟೆ ಸೃಷ್ಟಿಸಲು ಹೊರಟಿದೆ’ ಎಂದು ಆತಂಕ ವ್ಯಕ್ತಪಡಿಸಿದರು.

ಪಕ್ಷದ ಕಾರ್ಯಾಧ್ಯಕ್ಷ ಸೀತಾರಾಮ ಗುಂಡಪ್ಪ ಮಾತನಾಡಿ, ‘ಅಮೆರಿಕವು ತನ್ನ ಯಾಂತ್ರಿಕೃತ ಕೃಷಿ ವ್ಯವಸ್ಥೆಯಿಂದ ಬೆಳೆದಿರುವ ಕೃಷಿ ಉತ್ಪನ್ನಗಳು ಅಗ್ಗವಾಗಿರುತ್ತವೆ. ಇವುಗಳನ್ನು ಭಾರತದ ಮಾರುಕಟ್ಟೆಗೆ ಪರಿಚಯಿಸಿದಾಗ ರೈತರು ಬೆಳೆದಿರುವ ಬೆಳೆಗಳಿಗೆ ಕವಡೆ ಕಾಸಿನ ಕಿಮ್ಮತ್ತು ಸಹ ಸಿಗುವುದಿಲ್ಲ’ ಎಂದರು.

ಪ್ರತಿಭಟನೆಯಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಡಾ.ಸತೀಶ್ ಕುಮಾರ್ , ಮುಖಂಡರಾದ ಉಷಾ ಮೋಹನ್, ಅಶೋಕ್ ಮೃತ್ಯುಂಜಯ, ಶಶಿಧರ ಆರಾಧ್ಯ, ಡಾ.ದಿನೇಶ್, ಪುಟ್ಟಣ್ಣ ಗೌಡ, ಪುಷ್ಪ ಕೇಶವ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.