ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನ್ಯಾ.ಸಂದೇಶ್‌ಗೆ ಎಎಪಿ ಬೆಂಬಲ

Last Updated 6 ಜುಲೈ 2022, 19:56 IST
ಅಕ್ಷರ ಗಾತ್ರ

ಬೆಂಗಳೂರು: ‘ಭ್ರಷ್ಟಾಚಾರ ತಡೆ ಘಟಕಕ್ಕೆ(ಎಸಿಬಿ) ಸಂಬಂಧಿಸಿದ ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್‌ ನ್ಯಾಯಮೂರ್ತಿ ಎಚ್.ಸಿ. ಸಂದೇಶ್ ಅವರಿಗೆ ಬೆದರಿಕೆ ಹಾಕಿರುವ ಘಟನೆ ಆಘಾತಕಾರಿ ಬೆಳವಣಿಗೆ’ ಎಂದು ಆಮ್ ಆದ್ಮಿ ಪಕ್ಷ ಕಳವಳ ವ್ಯಕ್ತಪಡಿಸಿದೆ.

‘ರಾಜ್ಯದಲ್ಲಿ ಆಡಳಿತ ನಡೆಸು ತ್ತಿರುವ ಬಿಜೆಪಿ ಸರ್ಕಾರ ನ್ಯಾಯಾಂಗ ವ್ಯವಸ್ಥೆಯನ್ನು ತನ್ನ ಕಪಿಮುಷ್ಟಿ
ಯಲ್ಲಿ ಇಟ್ಟುಕೊಳ್ಳುವ ಪ್ರಯತ್ನ ಮಾಡುತ್ತಿದೆ. ಸರ್ಕಾರ ನ್ಯಾಯ ಮೂರ್ತಿಗಳ ಮೇಲೆ ಒತ್ತಡ ಹಾಕುವ ಮೂಲಕ ಸಂವಿಧಾನದ ಆಶಯಗಳನ್ನು ಬುಡಮೇಲು ಮಾಡಲು ಪ್ರಯತ್ನಿಸುತ್ತಿದೆ. ಸರ್ಕಾ ರದ ಕುತಂತ್ರಗಳಿಗೆ ಮಣಿಯದ ನ್ಯಾ. ಎಚ್.ಸಿ. ಸಂದೇಶ್ ಅವರಿಗೆ ಪಕ್ಷ ನೈತಿಕ ಬೆಂಬಲ ನೀಡಿದೆ’ ಎಂದು ಎಎಪಿ ಕಾನೂನು ಘಟಕದ ಅಧ್ಯಕ್ಷ ನಂಜಪ್ಪ ಕಾಳೇಗೌಡ ಸುದ್ದಿಗೋಷ್ಠಿಯಲ್ಲಿ ಹೇಳಿದರು.

‘ಬಳ್ಳಾರಿ ಗಣಿ ಅಕ್ರಮಗಳಿಗೆ ಸಹಕರಿಸಿದ ಆರೋಪವಿರುವ ಸೀಮಂತ್ ಕುಮಾರ್‌ ಅವರನ್ನು ಎಸಿಬಿಯ ಎಡಿಜಿಪಿ ಮಾಡಿರುವುದು ಖಂಡನೀಯ. ಜನರ ತೆರಿಗೆ ಹಣವನ್ನು ರಕ್ಷಿಸಬೇಕಾಗಿದ್ದ ಎಸಿಬಿಯೂ ಭ್ರಷ್ಟರ ಪರವಾಗಿ ಕೆಲಸ ಮಾಡುತ್ತಿದೆ. ಕೂಡಲೇ ಸೀಮಂತ್‌ ಕುಮಾರ್ ಅವರನ್ನು ಎಸಿಬಿ ಎಡಿಜಿಪಿ ಸ್ಥಾನದಿಂದ ಬದಲಾಯಿಸಬೇಕು’ ಎಂದು ಒತ್ತಾಯಿಸಿದರು.

ಎಎಪಿ ರಾಜ್ಯ ವಕ್ತಾರ ಕೆ. ಮಥಾಯಿ, ‘ನ್ಯಾಯಮೂರ್ತಿ ಎಚ್.ಸಿ. ಸಂದೇಶ್‌ ಮಾಡಿರುವ ಆರೋಪ ವನ್ನು ಗಂಭೀರವಾಗಿ ಪರಿಗಣಿಸಿ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆ ನಡೆಸಬೇಕು. ಪಿಎಸ್‌ಐ ನೇಮಕಾತಿಯಲ್ಲಿ ನಡೆದ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವ ಅಮ್ರಿತ್ ಪೌಲ್ ವಿರುದ್ಧದ ಆರೋಪ ಗಳಲ್ಲಿ ಅಶ್ವತ್ಥನಾರಾಯಣ ಮತ್ತು ಯಡಿಯೂರಪ್ಪನವರ ಪುತ್ರ ವಿಜಯೇಂದ್ರ ಹೆಸರು ಕೇಳಿಬರುತ್ತಿದೆ. ಇವರಿಬ್ಬರನ್ನು ಬಂಧಿಸಿ ವಿಚಾರಣೆ ನಡೆಸಬೇಕು’ ಎಂದು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT