ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಆರೋಗ್ಯ ಸೇತು’ ಕಡ್ಡಾಯ ಪಿಐಎಲ್: ಹೈಕೋರ್ಟ್ ನೋಟಿಸ್

Last Updated 4 ಜೂನ್ 2020, 22:20 IST
ಅಕ್ಷರ ಗಾತ್ರ

ಬೆಂಗಳೂರು: ‘ಆರೋಗ್ಯ ಸೇತು ಆ್ಯಪ್ ಬಳಕೆ ಕಡ್ಡಾಯಗೊಳಿಸಿರುವ ಕೇಂದ್ರದ ಕ್ರಮ ಕಾನೂನು ಬಾಹಿರ’ ಎಂದು ಆಕ್ಷೇಪಿಸಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವಾಲಯಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.

ಈ ಸಂಬಂಧ ನಗರದ ಅನಿವರ ಎ. ಅರವಿಂದ ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್
ಎಸ್. ಓಕಾ ಹಾಗೂ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ಕೇಂದ್ರ ರೈಲ್ವೆ, ವಾಯುಯಾನ ಸಚಿವಾಲಯ ಸೇರಿದಂತೆ ಏಳು ಪ್ರತಿವಾದಿಗಳಿಗೆ ನೋಟಿಸ್ ಜಾರಿಗೆ ಆದೇಶಿಸಲಾಗಿದೆ.

‘ದೇಶದಲ್ಲಿ ಶೇ 35ರಷ್ಷು ಜನರು ಮೊಬೈಲ್ ಫೋನ್ ಬಳಸು ತ್ತಾರೆ. ಆದರೆ, ಆ್ಯಂಡ್ರಾಯಿಡ್ ಫೋನ್‌ಗಳ‌ನ್ನೇ ಬಳಸುವುದಿಲ್ಲ. ಸರ್ಕಾರದ ಈ ನಿರ್ಧಾರ ಏಕಪಕ್ಷೀಯ ಹಾಗೂ ಕಾನೂನು ಬಾಹಿರ. ಇದು ಸಂವಿಧಾನದ 14ನೇ ವಿಧಿಯ ಉಲ್ಲಂಘನೆ. ಆದ್ದರಿಂದ, ಬಳಕೆಯನ್ನು ಐಚ್ಛಿಕ ಎಂದು ಪರಿಗಣಿಸಲು ನಿರ್ದೇಶಿಸಬೇಕು’ ಎಂದು ಅರ್ಜಿಯಲ್ಲಿ ಕೋರಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT