ಭಾನುವಾರ, ಜೂನ್ 7, 2020
27 °C
ಕೋವಿಡ್‌–19 ರೋಗಿಗಳ ಚಲನೆ ಗ್ರಹಿಸುವ ಮೊಬೈಲ್ ಆ್ಯಪ್

ಕನ್ನಡದಲ್ಲೂ ‘ಆರೋಗ್ಯ ಸೇತು’ ಮೊಬೈಲ್‌ ಆ್ಯಪ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಕೊರೊನಾ ಸೋಂಕಿತರು ಸೋಂಕು ಶಂಕಿತರ ಚಲನವಲನವನ್ನು ಜಿಪಿಎಸ್ ತಂತ್ರಜ್ಞಾನದ ಸಹಾಯದಿಂದ ಸೆರೆಹಿಡಿಯುವ ಕೇಂದ್ರ ಸರ್ಕಾರದ ‘ಆರೋಗ್ಯ ಸೇತು’ ಮೊಬೈಲ್ ಆ್ಯಪ್‌ನಲ್ಲಿ ಕನ್ನಡದ ಆಯ್ಕೆಯನ್ನೂ ನೀಡಲಾಗಿದೆ. 

ಹಿಂದಿ, ಇಂಗ್ಲಿಷ್, ತಮಿಳು ಸೇರಿದಂತೆ ಒಟ್ಟು 11 ಭಾಷೆಗಳ ಆಯ್ಕೆಯನ್ನು ನೀಡಲಾಗಿದೆ. ಕೊರೊನಾ ಸೋಂಕು ಹರಡುವ ಬಗೆ, ಅನುಸರಿಸಬೇಕಾದ ಮುಂಜಾಗ್ರತಾ ಕ್ರಮಗಳು, ಚಿಕಿತ್ಸಾ ವಿಧಾನ, ಸಹಾಯವಾಣಿ ಸೇರಿದಂತೆ ಹಲವು ಮಾಹಿತಿ ಲಭ್ಯವಿದೆ. ಸ್ವಯಂ ಮೌಲ್ಯ ಮಾಪನ ಪರೀಕ್ಷೆಗೂ ಅವಕಾಶ ನೀಡಲಾಗಿದೆ.  ಆರೋಗ್ಯಕ್ಕೆ ಸಂಬಂಧಿಸಿದ ಕೆಲ ಪ್ರಶ್ನೆಗಳು ಮೊಬೈಲ್ ಪರದೆಯ ಮೇಲೆ ಮೂಡಲಿದೆ. ಅದಕ್ಕೆ ಉತ್ತರಿಸಿದ ಬಳಿಕ ಫಲಿತಾಂಶವನ್ನೂ ನೀಡಲಾಗುತ್ತದೆ. 

ಕೋವಿಡ್‌–19 ರೋಗಿಗಳೊಂದಿಗೆ ಸಂಪರ್ಕ ಹೊಂದಿದವರ ಮೊಬೈಲ್‌ಗೆ ಸಂದೇಶ ಬರುವ ವ್ಯವಸ್ಥೆಯನ್ನು ರೂಪಿಸಲಾಗಿದೆ. ಈ ಆ್ಯಪ್‌ ಅನ್ನು 50 ಲಕ್ಷಕ್ಕೂ ಅಧಿಕ ಮಂದಿ ಡೌನ್‌ಲೋಡ್ ಮಾಡಿಕೊಂಡಿದ್ದಾರೆ. 

‘ಈ ಆ್ಯಪ್ ತುಂಬಾ ಸಹಕಾರಿಯಾಗಿದ್ದು, ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿದೆ. ಸರ್ಕಾರದ ಸುತ್ತೋಲೆಗಳು ಹಾಗೂ ಆದೇಶಗಳನ್ನೂ ತಿಳಿದುಕೊಳ್ಳಬಹುದಾಗಿದೆ’ ಎಂದು ಕೆಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇನ್ನೂ ಕೆಲವರು ‘ಈ ಆ್ಯಪ್‌ ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕಾದರೆ ಜಿಪಿಎಸ್ ಚಾಲನೆಯಲ್ಲಿ ಇರಬೇಕು. ಅದೇ ರೀತಿ, ಆ್ಯಪ್‌ ಮೂಲಕ ಆರೋಗ್ಯ ಪರೀಕ್ಷೆ ನಡೆಸಿ, ಫಲಿತಾಂಶ ನೀಡುತ್ತಿರುವುದು ವಿಶ್ವಾಸಾರ್ಹವಾಗಿಲ್ಲ’ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು