ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇಯರ್ ಎಲ್ಲಿದ್ದಾರೆ: ವಾಜಿದ್ ಪ್ರಶ್ನೆ

Last Updated 4 ಜುಲೈ 2020, 21:56 IST
ಅಕ್ಷರ ಗಾತ್ರ

ಬೆಂಗಳೂರು: ‘ನಗರದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಸಿಗದೆ ರೋಗಿಗಳು ಪಡಿಪಾಟಲು ಎದುರಿಸುತ್ತಿದ್ದಾರೆ. ಇಂತಹ ಬಿಕ್ಕಟ್ಟಿನ ಸಂದರ್ಭದಲ್ಲಿ ಮೇಯರ್ ಎಂ.ಗೌತಮ್‌ ಕುಮಾರ್‌ ಎಲ್ಲಿದ್ದಾರೆ’ ಎಂದು ಬಿಬಿಎಂಪಿ ವಿರೋಧ ಪಕ್ಷದ ನಾಯಕ ಅಬ್ದುಲ್ ವಾಜಿದ್ ಪ್ರಶ್ನಿಸಿದ್ದಾರೆ.

‘ವ್ಯಕ್ತಿಗೆ ಸೋಂಕು ದೃಢಪಟ್ಟಿದ್ದರೆ ಮಾತ್ರ ಆಸ್ಪತ್ರೆಗೆ ದಾಖಲಿಸಿಕೊಳ್ಳಲಾಗುತ್ತಿದೆ. ಉಸಿರಾಟದ ತೊಂದರೆ ಇದ್ದವರು ಆಸ್ಪತ್ರೆಗೆ ಹೋದರೆ ಸೋಂಕು ದೃಢಪಟ್ಟಿರುವ ವರದಿ ತೋರಿಸಿ ಎನ್ನುತ್ತಿದ್ದಾರೆ. ಹೀಗಾದರೆ ಅವರು ಎಲ್ಲಿಗೆ ಹೋಗಬೇಕು. ಇಷ್ಟೆಲ್ಲ ಆದರೂ ಮೇಯರ್‌ ಸ್ಪಂದಿಸುತ್ತಿಲ್ಲ. ಈ ಸಮಸ್ಯೆಗಳನ್ನು ಸರಿಪಡಿಸುವ ಕುರಿತು ಚರ್ಚಿಸಲು ಕೂಡಲೇ ಪಾಲಿಕೆ ಕೌನ್ಸಿಲ್‌ ಸಭೆ ಕರೆಯಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT