ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು | ಆತ್ಮಹತ್ಯೆಗೆ ಕುಮ್ಮಕ್ಕು ಪ್ರಕರಣ ರದ್ದು

Published 6 ಫೆಬ್ರುವರಿ 2024, 4:47 IST
Last Updated 6 ಫೆಬ್ರುವರಿ 2024, 4:47 IST
ಅಕ್ಷರ ಗಾತ್ರ

ಬೆಂಗಳೂರು: ಇಬ್ಬರು ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲಕ್ಕಸಂದ್ರದ ಮೇರಿ ಇಮ್ಮಾಕ್ಯುಲೇಟ್ ಶಾಲೆಯ ಪ್ರಾಂಶುಪಾಲರಾದ ಮರಿಯಾ ಲೈಲಾ, ಶಿಕ್ಷಕಿ ಫಿಲೋಮಿನಾ ಮಾನ್ಯುಯಲ್ ವಿರುದ್ಧದ ಆತ್ಮಹತ್ಯೆ ಕುಮ್ಮಕ್ಕು ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.

ಈ ಸಂಬಂಧ ಸಲ್ಲಿಸಲಾಗಿದ್ದಅರ್ಜಿಯನ್ನು ನ್ಯಾಯಮೂರ್ತಿ ಜಿ. ಬಸವರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಾನ್ಯ ಮಾಡಿದೆ. ‘ಆರೋಪಿಗಳು ವಿದ್ಯಾರ್ಥಿಗಳ ಆತ್ಮಹತ್ಯೆಗೆ ಹೇಗೆ ಪ್ರಚೋದನೆ ನೀಡಿದರು ಎಂಬುದನ್ನು ಸಾಬೀತು ಪಡಿಸುವಲ್ಲಿ ಪ್ರಾಸಿಕ್ಯೂಷನ್ ವಿಫಲವಾಗಿದೆ’ ಎಂಬ ಅಭಿಪ್ರಾಯದೊಂದಿಗೆ ಭಾರತೀಯ ದಂಡ ಸಂಹಿತೆ (ಐಪಿಸಿ) ಕಲಂ 306ರ ಅಡಿ ದಾಖಲಿಸಿದ್ದ ಪ್ರಕರಣವನ್ನು ನ್ಯಾಯಪೀಠ ರದ್ದುಗೊಳಿಸಿದೆ.

‘ಆರೋಪಿಗಳು ಮಕ್ಕಳನ್ನು ಸರಿಯಾಗಿ ನಡೆಸಿಕೊಳ್ಳುತ್ತಿರಲಿಲ್ಲ. ಹಾಗಾಗಿಯೇ, ಅವರು ಹತಾಶರಾಗಿ ಸ್ಯಾಂಕಿ ಕೆರೆಯಲ್ಲಿ ಮುಳುಗಿ ಸತ್ತಿದ್ದಾರೆ’ ಎಂದು ಪ್ರಾಸಿಕ್ಯೂಷನ್ ವಾದ ಮಂಡಿಸಿತ್ತು ಆದರೆ, ಇದನ್ನು ನ್ಯಾಯಪೀಠ ತಳ್ಳಿಹಾಕಿದೆ.

‘ವಿದ್ಯಾರ್ಥಿಗಳಿಗೆ ವಿಶೇಷ ತರಗತಿಗಳನ್ನು ತೆಗೆದುಕೊಳ್ಳಲಾಗುತ್ತಿತ್ತು ಎಂಬುದು ದಾಖಲೆಗಳಿಂದ ತಿಳಿದು ಬರುತ್ತದೆ. ಮಕ್ಕಳು ತರಗತಿಗಳಿಗೆ ಸರಿಯಾಗಿ ಹಾಜರಾಗದೇ ಇರುವುದು ಅವರನ್ನು ಬೈಯ್ಯುವುದು ಸಾಮಾನ್ಯ. ಡೆತ್ ನೋಟ್‌ ಬರೆದಿಟ್ಟಿದ್ದಾರೆ ಎಂದ ಮಾತ್ರಕ್ಕೆ ಆರೋಪಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗದು’ ಎಂದು ನ್ಯಾಯಪೀಠ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT