ಬೆಂಗಳೂರು: ಸಹಕಾರ ಸಂಘಗಳ ಮೂಲಕ ಸಾಲ ಪಡೆದು ಸುಸ್ತಿದಾರರಾಗಿರುವ ರೈತರು ಮಧ್ಯಮಾವಧಿ ಮತ್ತು ದೀರ್ಘಾವಧಿ ಕೃಷಿ ಹಾಗೂ ಕೃಷಿ ಸಂಬಂಧಿತ ಸಾಲಗಳ ಅಸಲು ಪಾವತಿಸಿದರೆ, ಬಡ್ಡಿ ಮನ್ನಾ ಮಾಡುವ ಯೋಜನೆಗೆ ಗುರುವಾರ ನಡೆದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.

ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ ಅವರು ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ‘ರೈತರು ಫೆಬ್ರುವರಿ 29ರೊಳಗೆ ಅಸಲು ಪಾವತಿಸಿದರೆ ಮಾತ್ರ ಬಡ್ಡಿ ಮನ್ನಾ ಆಗುತ್ತದೆ’ ಎಂದರು.

2023ರ ಡಿಸೆಂಬರ್ 31ಕ್ಕೆ ಸುಸ್ತಿದಾರರಾದವರಿಗೆ ಈ ಪ್ರಯೋಜನ ಸಿಗಲಿದೆ. ಈ ಸಂಬಂಧ ಜನವರಿ 20ರಂದೇ ಆದೇಶ ಹೊರಡಿಸಲಾಗಿತ್ತು. ಇದೀಗ ಸಂಪುಟ ಸಭೆ ಘಟನೋತ್ತರ ಅನುಮೋದನೆ ನೀಡಲಾಗಿದೆ. ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಭೂ ಅಭಿವೃದ್ಧಿ ಬ್ಯಾಂಕ್‌ಗಳು (ಪಿಕಾರ್ಡ್) ಮತ್ತು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ಗಳಲ್ಲಿ ಸುಸ್ತಿಯಾಗಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಕೃಷಿ ಸಾಲಗಳ ಸುಸ್ತಿ ಬಡ್ಡಿ ₹440.20 ಕೋಟಿ ಆಗಲಿದ್ದು, ಅದನ್ನು ಭರಿಸಲು ಒಪ್ಪಿಗೆ ನೀಡಲಾಯಿತು ಎಂದರು.

34 ಸ್ಥಳೀಯ ಸಂಸ್ಥೆಗಳಲ್ಲಿ ಅನಿಲ ಆಧಾರಿತ ಚಿತಾಗಾರ: ರಾಜ್ಯದ 10 ಮಹಾನಗರ ಪಾಲಿಕೆಗಳಲ್ಲಿ ಮತ್ತು ಆಯ್ದ 24 ನಗರಸಭೆಗಳಲ್ಲಿ ತಲಾ ಒಂದರಂತೆ 34 ಆಧುನಿಕ ಅನಿಲ /ವಿದ್ಯುತ್ ಚಿತಾಗಾರಗಳನ್ನು ನ್ಯಾಷನಲ್ ಹೌಸಿಂಗ್ ಬ್ಯಾಂಕ್ ನಗರ ಮೂಲಸೌಕರ್ಯ ಅಭಿವೃದ್ಧಿ ನಿಧಿ ಅಡಿ ₹136 ಕೋಟಿ ವೆಚ್ಚದಲ್ಲಿ ಸ್ಥಾಪಿಸಲು ಸಂಪುಟ ಒಪ್ಪಿಗೆ ನೀಡಿದೆ ಎಂದು ಎಚ್.ಕೆ.ಪಾಟೀಲ ತಿಳಿಸಿದರು.

ಶವಸಂಸ್ಕಾರ ನಡೆಸಲು ಆಧುನಿಕ ಮತ್ತು ವೈಜ್ಞಾನಿಕ ಪದ್ಧತಿಗಳನ್ನು ಬಳಸಲು 1 ಲಕ್ಷಕ್ಕಿಂತ ಹೆಚ್ಚಿನ ಜನಸಂಖ್ಯೆ ಇರುವ ಹಾಗೂ ಹೆಚ್ಚಿನ ಮರಣದ ಪ್ರಮಾಣ ಇರುವ ರಾಜ್ಯದ 10 ಮಹಾನಗರ ಪಾಲಿಕೆಗಳಲ್ಲಿ ಮತ್ತು ಆಯ್ದ 24 ನಗರಸಭೆಗಳಲ್ಲಿ ಚಿತಾಗಾರಗಳನ್ನು ತಲಾ ₹4 ಕೋಟಿ ವೆಚ್ಚದಲ್ಲಿ ಸ್ಥಾಪಿಸಲಾಗುವುದು ಎಂದು ಹೇಳಿದರು.

ಪೆಟ್ರೋ ಕಾರ್ಡ್ ಮೂಲಕ ಇಂಧನ: ಪೊಲೀಸ್ ಇಲಾಖೆಯ ಪ್ರಧಾನ ಕಚೇರಿ ಸೇರಿ ಇತರ ಘಟಕಗಳಲ್ಲಿನ ವಾಹನಗಳಿಗೆ ಪೆಟ್ರೋ ಕಾರ್ಡ್ ಮೂಲಕ ಇಂಧನ ಮತ್ತು ತೈಲವನ್ನು ಮೂರು ವರ್ಷಗಳ ಅವಧಿಗೆ ₹170 ಕೋಟಿ ಅಂದಾಜು ವೆಚ್ಚದಲ್ಲಿ ಖರೀದಿಸಲು ಸಂಪುಟ ಒಪ್ಪಿಗೆ ನೀಡಿದೆ. ಇಂಧನವನ್ನು ಭಾರತ ಸರ್ಕಾರ ಸ್ವಾಮ್ಯದ ತೈಲ ಮಾರಾಟ ಸಂಸ್ಥೆಯಿಂದ ಖರೀದಿಸಬೇಕು ಎಂದು ಪಾಟೀಲ ತಿಳಿಸಿದರು.

ಆನ್‌ಲೈನ್ ಮೂಲಕ ಹಿಂದೂಗಳ ವಿವಾಹ ನೋಂದಣಿ

ಹಿಂದೂಗಳಿಗೆ ಆನ್‌ಲೈನ್ ಮೂಲಕ ವಿವಾಹ ನೋಂದಣಿಗೆ ಅವಕಾಶ ನೀಡುವ ‘ಹಿಂದೂ ವಿವಾಹಗಳ ನೋಂದಣಿ (ಕರ್ನಾಟಕ) (ತಿದ್ದುಪಡಿ) ನಿಯಮ’ಗಳಿಗೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ಈವರೆಗೆ ಉಪನೋಂದಣಾಧಿಕಾರಿಗಳ ಕಚೇರಿಗಳಲ್ಲಿ ಮಾತ್ರ ವಿವಾಹ ನೋಂದಣಿ ಮಾಡಲಾಗುತ್ತಿತ್ತು. ಈ ಪ್ರಕ್ರಿಯೆಯನ್ನು ಇನ್ನಷ್ಟು ಸುಗಮಗೊಳಿಸಿ ಜನಸ್ನೇಹಿಯಾಗಿಸಲು ಕಾವೇರಿ– 2.0 ತಂತ್ರಾಂಶದಲ್ಲಿ ಆನ್‌ಲೈನ್ ಮೂಲಕ ನೋಂದಣಿ ಮಾಡಲು ಅವಕಾಶ ನೀಡಲಾಗಿದೆ.

ಗ್ರಾಮ ಪಂಚಾಯಿತಿಗಳಲ್ಲಿನ ಬಾಪೂಜಿ ಸೇವಾ ಕೇಂದ್ರ ಮತ್ತು ಗ್ರಾಮ 1 ಕೇಂದ್ರಗಳಲ್ಲಿಯೂ ಸಹ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುವುದು ಎಂದು ಸಚಿವ ಎಚ್.ಕೆ.ಪಾಟೀಲ ತಿಳಿಸಿದರು.

ಅಂಗನವಾಡಿ ಕಾರ್ಯಕರ್ತೆಯರಿಗೆ ಸೀರೆ: 2023–24ನೇ ಸಾಲಿಗೆ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಡಿ 1,37,469 ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ತಲಾ ಎರಡು ಸೀರೆಗಳಂತೆ 2,74,938 ಸೀರೆಗಳನ್ನು ವಿತರಿಸಲಾಗುವುದು. ಸೀರೆ ಖರೀದಿಗೆ ₹13.75 ಕೋಟಿ ಒದಗಿಸಲು ಅನುಮೋದನೆ ನೀಡಲಾಗಿದೆ.

ಪ್ರಮುಖ ತೀರ್ಮಾನಗಳು

* ರಾಯಚೂರು ವಿಶ್ವವಿದ್ಯಾಲಯ ಆವರಣದಲ್ಲಿ ₹42 ಕೋಟಿ ವೆಚ್ಚದಲ್ಲಿ ‘ಕಲ್ಯಾಣ ಕರ್ನಾಟಕ ಮಾನವ ಜಿನೋಮ್ ಅಧ್ಯಯನ ಸಂಸ್ಥೆ’ ನಿರ್ಮಾಣಕ್ಕೆ ಅನುಮೋದನೆ

* ಹಾಸನ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆವರಣದಲ್ಲಿ 450 ಹಾಸಿಗೆಗಳ ಸಾಮರ್ಥ್ಯದ ಆಸ್ಪತ್ರೆ ಕಟ್ಟಡ ನಿರ್ಮಾಣ ಕಾಮಗಾರಿಯ ಪರಿಷ್ಕೃತ ಅಂದಾಜು ಮೊತ್ತ ₹142.47 ಕೋಟಿಗೆ ಒಪ್ಪಿಗೆ

* 2023–24ನೇ ಸಾಲಿಗೆ 93 ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳಲ್ಲಿನ 104 ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ಒಟ್ಟು ₹60 ಕೋಟಿ ವೆಚ್ಚದಲ್ಲಿ ಕಲಿಕಾ ವಾತಾವರಣ ಅಭಿವೃದ್ಧಿಗೆ ಅನುಮೋದನೆ

* ಬೆಳಗಾವಿ ತಾಲ್ಲೂಕಿನ ಉಚ್ಛಗಾಂವ್ ಹಾಗೂ ಸಂತಿಬಸ್ತವಾಡ ಹೋಬಳಿಯ 20 ಕೆರೆಗಳನ್ನು ತುಂಬಿಸುವ ₹287.55 ಕೋಟಿ ಅಂದಾಜು ಮೊತ್ತದ ವಿವರವಾದ ಯೋಜನಾ ವರದಿಗೆ ಆಡಳಿತಾತ್ಮಕ ಅನುಮೋದನೆ

* ಬೆಳಗಾವಿ ಜಿಲ್ಲೆಯ ಹಿರೇಬಾಗೇವಾಡಿಯ 61 ಕೆರೆಗಳನ್ನು ತುಂಬಿಸುವ ಯೋಜನೆಯ ₹519.10 ಕೋಟಿಗಳ ಅಂದಾಜು ಮೊತ್ತದ ಪರಿಷ್ಕೃತ ವಿವರವಾದ ಯೋಜನಾ ವರದಿಗೆ ಅಡಳಿತ್ಮಾಕ ಅನುಮೋದನೆ

* ರಾಯಚೂರು ತಾಲ್ಲೂಕು ಚಿಕ್ಕಮಂಚಾಲಿ ಗ್ರಾಮದ ಬಳಿ ತುಂಗಭದ್ರಾ ನದಿಗೆ ಅಡ್ಡಲಾಗಿ ₹158 ಕೋಟಿ ವೆಚ್ಚದಲ್ಲಿ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣ ಕಾಮಗಾರಿಯ ₹158.10 ಕೋಟಿಗಳ ವಿವರವಾದ ಯೋಜನಾ ವರದಿಗೆ ಒಪ್ಪಿಗೆ. ಆಂಧ್ರಪ್ರದೇಶ ರಾಜ್ಯದ ಒಪ್ಪಿಗೆ ಪಡೆಯುವ ಷರತ್ತಿಗೆ ಒಳಪಟ್ಟು ಅನುಮತಿ ನೀಡಲಾಗಿದೆ

* ನಬಾರ್ಡ್ ಆರ್‌ಐಡಿಎಫ್–29 ನೆರವಿನೊಂದಿಗೆ ರಾಜ್ಯದ 6 ಜಿಲ್ಲೆಗಳಲ್ಲಿ 6 ಬಹುಉತ್ಪನ್ನ ಶೀತಲ ಗೃಹಗಳನ್ನು ₹65.97 ಕೋಟಿ ವೆಚ್ಚದಲ್ಲಿ ನಿರ್ಮಿಸಲು
ಅನುಮೋದನೆ

* ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವತಿಯಿಂದ ಕಲಬುರಗಿ ಮತ್ತು ಮೈಸೂರಿನಲ್ಲಿ ಅಲೈಡ್ ಹೆಲ್ತ್ ಸೈನ್ಸಸ್ ಕಾಲೇಜುಗಳನ್ನು ಕ್ರಮವಾಗಿ ₹49.50 ಕೋಟಿ, ₹49.80 ಕೋಟಿ ಅಂದಾಜು ವೆಚ್ಚದಲ್ಲಿ ನಿರ್ಮಾಣ. ಮಂಗಳೂರಿನಲ್ಲಿ ಪ್ರಾದೇಶಿಕ ಕೇಂದ್ರ ಕಚೇರಿ ಮತ್ತು ಅದರಲ್ಲಿಯೇ ಅತ್ಯಾಧುನಿಕ ಪ್ರಯೋಗಾಲಯಗಳು, ಸಂಶೋಧನಾ ಕೇಂದ್ರ ಮತ್ತು ಒಳಾಂಗಣ ಕ್ರೀಡಾ ಸೌಲಭ್ಯಗಳನ್ನು ₹49.75 ಕೋಟಿ ವೆಚ್ಚದಲ್ಲಿ ನಿರ್ಮಾಣಕ್ಕೆ ಒಪ್ಪಿಗೆ

* ಗುಲ್ಬರ್ಗಾ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಆವರಣದಲ್ಲಿ ಸುಟ್ಟಗಾಯಗಳ ಚಿಕಿತ್ಸಾ ಘಟಕಗಳನ್ನು ₹31.54 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಅನುಮತಿ. ಹಾವೇರಿ ವೈದ್ಯಕೀಯ ವಿಜ್ಞಾನಗಳ ಕಟ್ಟಡ ಕಾಮಗಾರಿಗಳ ಪರಿಷ್ಕೃತ ಅಂದಾಜು ಮೊತ್ತ ₹499 ಕೋಟಿಗೆ ಒಪ್ಪಿಗೆ

* ರಾಜ್ಯ 6 ಐಟಿಐಗಳನ್ನು ₹100 ಕೋಟಿ ವೆಚ್ಚದಲ್ಲಿ ಉನ್ನತೀಕರಿಸಲು ಒಪ್ಪಿಗೆ

* ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ ಹೊಸ ವೈದ್ಯಕೀಯ ಕಾಲೇಜು, ಪುರುಷ ಮತ್ತು ಮಹಿಳಾ ಹಾಸ್ಟೆಲ್, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವಸತಿ ನಿಲಯ ಕಾಮಗಾರಿಗಳ ₹455 ಕೋಟಿ ಪರಿಷ್ಕೃತ ಅಂದಾಜು ಮೊತ್ತಕ್ಕೆ ಅನುಮೋದನೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.