ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಸ್ತಿ ತೆರಿಗೆ ಹೆಚ್ಚಳ ಪ್ರಸ್ತಾವ ಕೈಬಿಡಿ: ಸಿಪಿಎಂ ಒತ್ತಾಯ

Last Updated 26 ಆಗಸ್ಟ್ 2020, 4:49 IST
ಅಕ್ಷರ ಗಾತ್ರ

ಬೆಂಗಳೂರು: ಪಾಲಿಕೆಯ ಆರ್ಥಿಕ ಸಂಕಷ್ಟವನ್ನು ನೆಪವಾಗಿಟ್ಟುಕೊಂಡು ಪ್ರತಿವರ್ಷ ಆಸ್ತಿ ತೆರಿಗೆ ಹೆಚ್ಚಿಸುವ ಕುರಿತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪಾಲಿಕೆ ಸಲ್ಲಿಸಿರುವ ಪ್ರಸ್ತಾವವನ್ನು ಹಿಂಪಡೆಯಬೇಕು ಎಂದು ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ ವಾದಿ) ಒತ್ತಾಯಿಸಿದೆ.

'ಆರ್ಥಿಕ ತೆರಿಗೆ ಹೆಚ್ಚಿಸುವ ಜನವಿರೋಧಿ ಕ್ರಮಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಕೊರೊನಾದಿಂದ ಪರಿತಪ್ಪಿಸುತ್ತಿರುವ ಈ ಸಂದರ್ಭದಲ್ಲಿ ನಗರವಾಸಿಗಳನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಲಿದೆ' ಎಂದು ಪಕ್ಷದ ಬೆಂಗಳೂರು ಉತ್ತರ ಜಿಲ್ಲಾ ಸಮಿತಿ ಅಧ್ಯಕ್ಷ ಎನ್.ಪ್ರತಾಪ್ ಸಿಂಹ ದೂರಿದ್ದಾರೆ.

'ನಗರದ ಆಸ್ತಿಗಳ ಸಮರ್ಪಕ ಪಟ್ಟಿ ತಯಾರಿಸುವ ಮೂಲಕ ಪೂರ್ಣ ಪ್ರಮಾಣದಲ್ಲಿ ತೆರಿಗೆ ಸಂಗ್ರಹಿಸಬೇಕಿತ್ತು. ಅದನ್ನು ಬಿಟ್ಟು ಪ್ರತಿ ವರ್ಷ ತೆರಿಗೆ ಹೆಚ್ಚಿಸುವುದು ಸರಿಯಲ್ಲ. ಯಾವ ಕಾರಣಕ್ಕೂ ಆಸ್ತಿ ತೆರಿಗೆ ಹೆಚ್ಚಳ ಮಾಡಬಾರದು' ಎಂದು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT