ಶುಕ್ರವಾರ, 19 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಸ್‌ ಪಾಸ್‌ ವಿತರಣೆಗೆ ಎಬಿವಿಪಿ ಆಗ್ರಹ

Published 10 ಜುಲೈ 2024, 16:10 IST
Last Updated 10 ಜುಲೈ 2024, 16:10 IST
ಅಕ್ಷರ ಗಾತ್ರ

ಬೆಂಗಳೂರು: ವಿದ್ಯಾರ್ಥಿಗಳಿಗೆ ಬಸ್‌ ಪಾಸ್‌ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇದೇ 12ರಂದು ಜಿಲ್ಲಾ ಉಸ್ತುವಾರಿ ಸಚಿವರ ಮನೆಗಳ ಮುಂದೆ ಪ್ರತಿಭಟನೆ ಮಾಡಲಾಗುವುದು ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ತಿಳಿಸಿದೆ.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಬಿವಿಪಿ ರಾಜ್ಯ ಕಾರ್ಯದರ್ಶಿಗಳಾದ ಪ್ರವೀಣ್, ಸಚಿನ್ ಕುಳಗೇರಿ,‘ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯಲು ನಗರ ಪ್ರದೇಶಗಳ ಶಾಲಾ–ಕಾಲೇಜುಗಳನ್ನು ಅವಲಂಭಿಸಿದ್ದಾರೆ. ಹಳ್ಳಿಗಳಿಂದ ನಗರ ಪ್ರದೇಶಗಳಿಗೆ ಬರುವ ವಿದ್ಯಾರ್ಥಿಗಳಿಗೆ ಇದುವರೆಗೂ ಬಸ್‌ ಪಾಸ್‌ ವಿತರಿಸಿಲ್ಲ. ವಿದ್ಯಾರ್ಥಿಗಳು ಪ್ರತಿನಿತ್ಯ ಹಣ ಖರ್ಚು ಮಾಡಿಕೊಂಡು ಶಾಲಾ–ಕಾಲೇಜುಗಳಿಗೆ ಬರುತ್ತಿದ್ದಾರೆ. ತಕ್ಷಣ ವಿದ್ಯಾರ್ಥಿಗಳಿಗೆ ಪಾಸ್‌ ವಿತರಿಸುವ ವ್ಯವಸ್ಥೆ ಮಾಡಬೇಕು. ಜೊತೆಗೆ ಗ್ರಾಮೀಣ ಭಾಗದಲ್ಲಿ ಬಸ್‌ಗಳ ಸಂಖ್ಯೆಯನ್ನು ಹೆಚ್ಚಿಸಬೇಕು’ ಎಂದು ಆಗ್ರಹಿಸಿದರು.

‘ಜೂನ್‌ ತಿಂಗಳಲ್ಲಿಯೇ ಶಾಲಾ–ಕಾಲೇಜುಗಳು ಪ್ರಾರಂಭವಾದರೂ ವಿದ್ಯಾರ್ಥಿಗಳಿಗೆ ಇದುವರೆಗೂ ವಿದ್ಯಾರ್ಥಿನಿಲಯಗಳಿಗೆ ಪ್ರವೇಶ ನೀಡಿಲ್ಲ. ಇದರಿಂದ, ವಿದ್ಯಾರ್ಥಿಗಳ ಕಲಿಕೆಗೆ ಹಿನ್ನಡೆ ಆಗಲಿದೆ. ಹಾಸ್ಟೆಲ್‌ ಪ್ರವೇಶ ಸಿಗುವುದಿಲ್ಲ ಎಂಬ ಕಾರಣಕ್ಕೆ ಕೆಲ ವಿದ್ಯಾರ್ಥಿಗಳು ಉನ್ನತ ಶಿಕ್ಷಣವನ್ನು ಮೊಟಕುಗೊಳಿಸುತ್ತಿದ್ದಾರೆ. ಆದ್ದರಿಂದ, ಹಾಸ್ಟೆಲ್‌ ಪ್ರವೇಶ ಪ್ರಕ್ರಿಯೆಯನ್ನು ಬೇಗ ಮುಗಿಸಬೇಕು’ ಎಂದು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT