ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಕ್ಕಿನ ಮೇಲ್ಸೇತುವೆ: ‘ಸುಪ್ರೀಂ’ ವಿಚಾರಣೆ 12ರಿಂದ

Last Updated 5 ಮಾರ್ಚ್ 2018, 20:13 IST
ಅಕ್ಷರ ಗಾತ್ರ

ನವದೆಹಲಿ: ಬೆಂಗಳೂರಿನ ಹರೇಕೃಷ್ಣ ರಸ್ತೆಯಲ್ಲಿ ಉಕ್ಕಿನ ಮೇಲ್ಸೇತುವೆ ನಿರ್ಮಿಸುವ ಪ್ರಸ್ತಾವ ವಿರೋಧಿಸಿ ಸಲ್ಲಿಸಲಾಗಿರುವ ಮೇಲ್ಮನವಿಯ ವಿಚಾರಣೆಗೆ ಸುಪ್ರೀಂ ಕೋರ್ಟ್‌ ಸಮ್ಮತಿ ಸೂಚಿಸಿದೆ.

ಮೇಲ್ಸೇತುವೆ ಪ್ರಸ್ತಾವವನ್ನು ವಿರೋಧಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌)ಯನ್ನು ವಜಾಗೊಳಿಸಿ ಕಳೆದ ಜನವರಿ 8ರಂದು ರಾಜ್ಯ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ಬೆಂಗಳೂರು ನಿವಾಸಿ ಬಿ.ಪಿ.ಮಹೇಶ್ ಮತ್ತಿತರರು ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆಯನ್ನು ಇದೇ 12ರಿಂದ ನಡೆಸಲಾಗುವುದು ಎಂದು ಮುಖ್ಯ ನ್ಯಾಯಮೂರ್ತಿ ದೀಪಕ್‌ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠ ಸೋಮವಾರ ತಿಳಿಸಿತು.

ರೋಸ್ಟರ್‌ಗೆ ಅನುಗುಣವಾಗಿ ರೂಪಿಸಲಾಗುವ ಸುಪ್ರೀಂ ಕೋರ್ಟ್‌ನ ನಿಗದಿತ ಪೀಠವು ಪ್ರಕರಣದ ವಿಚಾರಣೆ ನಡೆಸಲಿದೆ ಎಂದು ನ್ಯಾಯಮೂರ್ತಿಗಳಾದ ಎ.ಎಂ. ಖನ್ವಿಲ್ಕರ್‌ ಹಾಗೂ ಡಿ.ವೈ. ಚಂದ್ರಚೂಡ್‌ ಅವರನ್ನು ಒಳಗೊಂಡ ಪೀಠ ಹೇಳಿತು.

ಪ್ರಸ್ತಾವಿತ ಉಕ್ಕಿನ ಮೇಲ್ಸೇತುವೆಯ ನಿರ್ಮಾಣಕ್ಕೆ ಸಂಬಂಧಿಸಿದಂತೆ ಎಲ್ಲ ನಿಯಮಗಳನ್ನು ಗಾಳಿಗೆ ತೂರಲಾಗುತ್ತಿದೆ ಎಂದು ಅರ್ಜಿದಾರರು ದೂರಿದ್ದಾರೆ.

ಮೇಲ್ಸೇತುವೆ ನಿರ್ಮಾಣದಲ್ಲಿ ಪ್ರಗತಿ ಸಾಧಿಸುವ ಯಾವುದೇ ಕ್ರಮವು ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾಗಬಹುದು ಎಂದೂ ಪಿಐಎಲ್‌ ವಜಾಗೊಳಿಸಿದ ಸಂದರ್ಭ ಹೈಕೋರ್ಟ್ ಅಭಿಪ್ರಾಯಪಟ್ಟಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT