ಬೆಂಗಳೂರು: ಭ್ರಷ್ಟಾಚಾರ ಆರೋಪದ ಮೇಲೆ ಕೋರಮಂಗಲ ಪ್ರಾದೇಶಿಕ ಸಾರಿಗೆ ಅಧಿಕಾರಿ ಕಚೇರಿ ಮೇಲೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಅಧಿಕಾರಿಗಳು ಶುಕ್ರವಾರ ಸಂಜೆ ದಾಳಿ ಮಾಡಿದ್ದು, ಶೋಧ ನಡೆಸುತ್ತಿದ್ದಾರೆ.
ಕಚೇರಿಯಲ್ಲಿ ಬೃಹತ್ ಪ್ರಮಾಣದ ಲಂಚದ ವಹಿವಾಟು ನಡೆಯುತ್ತಿರುವ ಮಾಹಿತಿ ಆಧರಿಸಿ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೃಹತ್ ಪ್ರಮಾಣದ ನಗದು ವಶಕ್ಕೆ ಪಡೆಯಲಾಗಿದೆ. ಕಚೇರಿಯೊಳಗಿದ್ದ ಖಾಸಗಿ ಮಧ್ಯವರ್ತಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
ಎಸಿಬಿ ಬೆಂಗಳೂರು ನಗರ ಘಟಕದ ಎಸ್ ಪಿ ಕುಲದೀಪ್ ಕುಮಾರ್ ಆರ್. ಜೈನ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯುತ್ತಿದೆ. ಶೋಧ ಮುಂದುವರಿದಿದೆ.