ಸೋಮವಾರ, ಏಪ್ರಿಲ್ 12, 2021
24 °C
ಎಸಿಬಿಯಿಂದ ಇಂದು ವಿಶೇಷ ನ್ಯಾಯಾಲಯಕ್ಕೆ ಹಾಜರು

ಎಸಿಬಿ: ಮುಂದುವರಿದ ವಿಕ್ಟರ್‌ ಸೈಮನ್‌ ವಿಚಾರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪ ಎದುರಿಸುತ್ತಿರುವ ಬೆಂಗಳೂರು ಮಹಾನಗರ ಕಾರ್ಯಪಡೆ ಇನ್‌ಸ್ಪೆಕ್ಟರ್ ವಿಕ್ಟರ್‌ ಸೈಮನ್‌ ಅವರ ಪೊಲೀಸ್‌ ಕಸ್ಟಡಿಯನ್ನು ಎರಡು ದಿನಗಳ ಕಾಲ ವಿಸ್ತರಿಸಿದ್ದು, ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ವಿಚಾರಣೆ ಮುಂದುವರಿಸಿದ್ದಾರೆ.

ಮಾರ್ಚ್‌ 9ರಂದು ವಿಕ್ಟರ್‌ ಮನೆ ಮೇಲೆ ಎಸಿಬಿ ದಾಳಿ ನಡೆದಿತ್ತು. ವಿಚಾರಣೆಗೆ ಸಹಕರಿಸದ ಆರೋಪದ ಮೇಲೆ ಮಾ.10ರಂದು ಬಂಧಿಸಲಾಗಿತ್ತು. ಶನಿವಾರದವರೆಗೂ ತನಿಖಾ ತಂಡದ ವಶಕ್ಕೆ ನೀಡಿ ನ್ಯಾಯಾಲಯ ಆದೇಶ ಹೊರಡಿಸಿತ್ತು. ಆರೋಪಿಯು ಎಸಿಬಿ ವಶದಲ್ಲಿದ್ದಾಗ ತನಿಖೆಗೆ ಸಹಕರಿಸಿಲ್ಲ ಎಂದು ತನಿಖಾಧಿಕಾರಿ ಶನಿವಾರ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದರು. ಅವರ ಕೋರಿಕೆಯಂತೆ ಸೋಮವಾರದವರೆಗೂ ಆರೋಪಿಯನ್ನು ತನಿಖಾ ತಂಡದ ವಶಕ್ಕೆ ನೀಡಲಾಗಿದೆ.

‘ದಾಳಿ ವೇಳೆ ಪತ್ತೆಯಾಗಿರುವ ಆಸ್ತಿ ಮತ್ತು ದಾಖಲೆಗಳ ಕುರಿತು ವಿಕ್ಟರ್‌ ಅವರ ವಿಚಾರಣೆ ನಡೆಯುತ್ತಿದೆ. ಸೋಮವಾರ ಮಧ್ಯಾಹ್ನ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಅಗತ್ಯ ಕಂಡುಬಂದಲ್ಲಿ ಮತ್ತೆ ವಶಕ್ಕೆ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಸಲ್ಲಿಸಲಾಗುವುದು’ ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು