ಮಂಗಳವಾರ, ಜನವರಿ 26, 2021
25 °C

ಎಸಿಬಿ ಅಧಿಕಾರಿ ಹೆಸರಿನಲ್ಲಿ ಹಣಕ್ಕೆ ಬೇಡಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಅಪರಿಚಿತ ವ್ಯಕ್ತಿಯೊಬ್ಬ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿ ಸೋಗಿನಲ್ಲಿ ಕರೆ ಮಾಡಿ ಹಣಕ್ಕೆ ಬೇಡಿಕೆ ಇಟ್ಟ ಬಗ್ಗೆ ಹಲಸೂರು ಗೇಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಎಂಜಿನಿಯರ್‌ ಒಬ್ಬರು ದೂರು ನೀಡಿದ್ದಾರೆ. ಅಪರಿಚಿತನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

‘ಎಸಿಬಿ ಡಿವೈಎಸ್ಪಿಯೊಬ್ಬರ ಹೆಸರಿನಲ್ಲಿ ಕರೆ ಮಾಡಿದ್ದ ಅಪರಿಚಿತ, ‘ಭ್ರಷ್ಟಾಚಾರದ ಆರೋಪದಡಿ ನಿಮ್ಮ ಮೇಲೆ ದೂರು ಬಂದಿದೆ. ತನಿಖೆ ಮಾಡಬೇಕಿದ್ದು, ನಿಮ್ಮ ಮನೆ ಮೇಲೂ ದಾಳಿ ಮಾಡಲಾಗುವುದು’ ಎಂದು ಎಂಜಿನಿಯರ್ ಅವರನ್ನು ಬೆದರಿಸಿದ್ದ. ತನಿಖೆ ಮಾಡದಿರಲು ತನ್ನ ಖಾತೆಗೆ ಹಣ ಹಾಕಬೇಕು. ವಿದೇಶಿ ಪ್ರವಾಸಕ್ಕೆ ಟಿಕೆಟ್ ಕಾಯ್ದಿರಿಸಬೇಕು ಎಂದೂ ಒತ್ತಾಯಿಸಿದ್ದ. ಅನುಮಾನಗೊಂಡ ಎಂಜಿನಿಯರ್, ಠಾಣೆಗೆ ದೂರು ನೀಡಿದ್ದಾರೆ’ ಎಂದೂ ಮೂಲಗಳು ಹೇಳಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.