ಬುಧವಾರ, ಆಗಸ್ಟ್ 4, 2021
22 °C

ಎಸಿಪಿ ಪ್ರಭುಶಂಕರ್‌ ಆಪ್ತರ ಮನೆ ಮೇಲೆ ಎಸಿಬಿ ದಾಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸಿಗರೇಟ್‌ ವಿತರಕರು ಹಾಗೂ ನಕಲಿ ಮಾಸ್ಕ್‌ ತಯಾರಿಕರಿಂದ ಲಂಚ ಪಡೆದ ಪ್ರಕರಣದ ಪ್ರಮುಖ ಆರೋಪಿ ಸಿಸಿಬಿ ಎಸಿಪಿ ಪ್ರಭುಶಂಕರ್‌ ಆಪ್ತರಿಬ್ಬರ ಮನೆಗಳ ಮೇಲೆ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ಶನಿವಾರ ದಾಳಿ ನಡೆಸಿ, ಕೆಲ ದಾಖಲೆ ವಶಪಡಿಸಿಕೊಂಡಿದ್ದಾರೆ.

ಪ್ರಭುಶಂಕರ್‌ ಆಪ್ತರಿಗೆ ಸೇರಿದ ಯಲಹಂಕ ಹಾಗೂ ದೇವನಹಳ್ಳಿಯ ಮನೆಗಳ ಮೇಲೆಏಕಕಾಲಕ್ಕೆ ದಾಳಿ ನಡೆಸಿ, ಶೋಧಿಸಲಾಗಿದೆ. ಕಳೆದ ಮೇ 22ರಂದು ಎಸಿಪಿ‌ ಮನೆ, ಕಚೇರಿ ಮೇಲೆ ನಡೆದಿದ್ದ ದಾಳಿ ವೇಳೆ ವಶಪಡಿಸಿಕೊಂಡಿದ್ದ ಡೈರಿಯಲ್ಲಿ ಸಿಕ್ಕ ಸುಳಿವು ಆಧರಿಸಿ ಇಂದಿನ ದಾಳಿ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಎಸಿಪಿ ಆಪ್ತರ ಹೆಸರುಗಳನ್ನು ಬಹಿರಂಗಪಡಿಸಲು ಮೂಲಗಳು ನಿರಾಕರಿಸಿವೆ. ಸಿಸಿಬಿ ಆರ್ಥಿಕ ಅಪರಾಧಗಳ ತಡೆ ವಿಭಾಗದಲ್ಲಿದ್ದ ಪ್ರಭುಶಂಕರ್‌, ಸಿಐಗಳಾದ ಅಜಯ್‌, ನಿರಂಜನ ಕುಮಾರ್, ಲಾಕ್‌ಡೌನ್‌ ಸಮಯದಲ್ಲಿ ಸಿಗರೇಟ್‌ಗಳನ್ನು ದುಬಾರಿ ಬೆಲೆಗೆ ಮಾರಾಟ ಮಾಡಲು ಅವಕಾಶ ಕೊಡಲು ಎಂ.ಡಿ. ಆ್ಯಂಡ್‌ ಸನ್ಸ್‌ ಮತ್ತು ಮಹಾವೀರ್‌ ಟ್ರೇಡರ್ಸ್‌ ಮತ್ತಿತರ ಸಿಗರೇಟ್‌ ವಿತರಕರಿಂದ
₹ 85 ಲಕ್ಷ ಲಂಚ ಪಡೆದ ಆರೋಪಕ್ಕೆ ಓಳಗಾಗಿದ್ದಾರೆ.

ಇನ್ನೊಂದು ಪ್ರಕರಣದಲ್ಲಿ, ಎನ್– 95 ನಕಲಿ ಮಾಸ್ಕ್‌ ತಯಾರಿಸುವಾಗ ಸಿಕ್ಕಿಬಿದ್ದ ಆರೋಪಿಗೆ ರಕ್ಷಣೆ ನೀಡಲು ₹ 15 ಲಕ್ಷ ಲಂಚ ಪಡೆಯಲಾಗಿದೆ ಎಂದೂ ದೂರಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು