ಮಂಗಳವಾರ, ಅಕ್ಟೋಬರ್ 27, 2020
28 °C

ಎಂಜಿನಿಯರ್‌ ಮನೆ, ಕಚೇರಿ ಮೇಲೆ ದಾಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಶ್ರೀನಿವಾಸ ಗಾಯತ್ರಿ ರಿಸೋರ್ಸ್‌ ರಿಕವರಿ ಕಂಪನಿ ಎಂಬ ಖಾಸಗಿ ಸಂಸ್ಥೆಯು ಘನತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ನೀಡಿದ್ದ ಸರ್ಕಾರಿ ಜಮೀನನ್ನು ಅಡವಿಟ್ಟು ₹ 52.75 ಕೋಟಿ ಸಾಲ ಪಡೆದು ವಂಚಿಸಿದ್ದ ಪ್ರಕರಣದಲ್ಲಿ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಮನೆ, ಕಚೇರಿಗಳ ಮೇಲೆ ಮಂಗಳವಾರ ದಾಳಿ ಮಾಡಿದ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು, ಶೋಧ ನಡೆಸಿದರು.

ಸೆ. 19ರಂದು ಪಾಲಿಕೆಯ ನಾಲ್ವರು ಎಂಜಿನಿಯರ್‌ಗಳ ಮನೆ, ಕಚೇರಿಗಳ ಮೇಲೆ ದಾಳಿ ನಡೆದಿತ್ತು. ಪಾಲಿಕೆಯ ಮಳೆನೀರು ಕಾಲುವೆ ವಿಭಾಗದ ಎಂಜಿನಿಯರ್‌ ರಾಘವೇಂದ್ರ ಅವರ ಕೋಣನಕುಂಟೆಯ ಮನೆ, ಜಯನಗರ ಕಚೇರಿಗಳ ಮೇಲೆ ಮಂಗಳವಾರ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದರು.

ಎಸಿಬಿ ಬೆಂಗಳೂರು ನಗರ ಎಸ್‌ಪಿ ಕುಲದೀಪ್‌ ಕುಮಾರ್‌ ಆರ್‌. ಜೈನ್‌ ನೇತೃತ್ವದಲ್ಲಿ ದಾಳಿ ನಡೆದಿದೆ. ಎರಡೂ ಸ್ಥಳಗಳಲ್ಲಿ ಶೋಧ ನಡೆಸಿದ್ದು, ಪ್ರಕರಣಕ್ಕೆ ಸಂಬಂಧಿಸಿದ ಹಲವು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ ಶ್ರೀನಿವಾಸ ಗಾಯತ್ರಿ ರಿಸೋರ್ಸ್‌ ರಿಕವರಿ ಕಂಪನಿಯು ಸರ್ಕಾರಿ ಜಮೀನು ಅಡವಿಟ್ಟು ₹ 52.75 ಕೋಟಿ ಸಾಲ ಪಡೆದಿದ್ದಲ್ಲದೇ, ತ್ಯಾಜ್ಯ ವಿಲೇವಾರಿ ಮಾಡದೇ ಅಕ್ರಮವಾಗಿ ₹ 4.61 ಕೋಟಿ ಶುಲ್ಕ ಪಡೆದಿರುವ ಆರೋಪವಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು