ಶುಕ್ರವಾರ, ಜನವರಿ 24, 2020
16 °C

ಅಪಘಾತ; ತಾಯಿ ಸಾವು, ಮಗನಿಗೆ ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಯಶವಂತಪುರ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ರಾತ್ರಿ ಗ್ಯಾಸ್ ಟ್ಯಾಂಕರ್ ಹಾಗೂ ಬೈಕ್‌ ನಡುವೆ ಅಪಘಾತ ಸಂಭವಿಸಿದ್ದು, ಬೈಕ್‌ನ ಹಿಂಬದಿ ಕುಳಿತಿದ್ದ ಮುತ್ಯಾಲಮ್ಮ (45) ಎಂಬುವರು ಮೃತಪಟ್ಟಿದ್ದಾರೆ.

‘ಮುತ್ಯಾಲಮ್ಮ ಅವರ ಮಗ ಮುರುಳಿ ಎಂಬುವರೂ ಗಾಯಗೊಂಡಿದ್ದಾರೆ. ಘಟನೆ ಸಂಬಂಧ ಗ್ಯಾಸ್ ಟ್ಯಾಂಕರ್ ಚಾಲಕ ಶ್ರೀಧರ್ ಎಂಬಾತನನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಮುತ್ಯಾಲಮ್ಮ ಅವರು ಗಾರ್ಮೆಟ್ಸ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು. ಮುರುಳಿ ಅವರು ಸಲೂನ್ ನಡೆಸುತ್ತಿದ್ದರು. ಇವರಿಬ್ಬರು ರಾತ್ರಿ 7.20ರ ಸುಮಾರಿಗೆ ಬೈಕ್‌ನಲ್ಲಿ ಹೊರಟಿದ್ದಾಗಲೇ ಈ ಅವಘಡ ಸಂಭವಿಸಿದೆ.’

‘ಮುತ್ಯಾಲಮ್ಮ ಅವರ ತಲೆ ಹಾಗೂ ಮುಖಕ್ಕೆ ತೀವ್ರ ಪೆಟ್ಟಾಗಿತ್ತು. ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗದಲ್ಲೇ ಅವರು ಮೃತಪಟ್ಟಿದ್ದಾರೆ’ ಎಂದು ಪೊಲೀಸರು ತಿಳಿಸಿದರು. 

ಪ್ರತಿಕ್ರಿಯಿಸಿ (+)